ಸೇನಾ ಹೆಲಿಕಾಫ್ಟರ್ ಪತನದ ಹಿಂದೆ ಚೀನಾ ಕೈವಾಡ? | ಲೇಸರ್ ದಾಳಿ ನಡೆಯಿತೇ?
ನವದೆಹಲಿ: ಭಾರತೀಯ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ಸಿಂಗ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನದ ಬಗ್ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದು, ಹೆಲಿಕಾಫ್ಟರ್ ಪತನದ ಹಿಂದೆ ಚೀನಾದ ಕೈವಾಡ ವಿರುವ ಬಗ್ಗೆ ಅವರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಘಟನೆಯ ಬಗ್ಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿರುವ ಅವರು, ಭಾರತೀಯ ಸೇನೆಯಲ್ಲಿ ಇರುವ ಕೆಲವೇ ಕೆಲವು ಹಿರಿಯ ಅಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ಆಗಾಗ ಎಚ್ಚರಿಕೆ ಸಂದೇಶವನ್ನು ನೀಡುತ್ತಿದ್ದರು. ಚೀನಾದಿಂದ ಗಡಿ ರೇಖೆ ಉಲ್ಲಂಘನೆ ಆಗುತ್ತಿದೆ, ಚೀನಾದಿಂದ ಬೆದರಿಕೆಗಳು ಹೆಚ್ಚುತ್ತಿವೆ, ಚೀನಾದಿಂದ ನಿಯಮಗಳು ಪಾಲನೆ ಆಗುತ್ತಿಲ್ಲ ಎಂಬುದನ್ನು ಸರ್ಕಾರದ ಗಮನಕ್ಕೆ ತರುತ್ತಿದ್ದರು ಎಂದು ಸುಬ್ರಮಣಿಯನ್ ಸ್ವಾಮಿ ಈ ಘಟನೆಯ ಬೆನ್ನಲ್ಲೇ ನೆನಪಿಸಿಕೊಂಡಿದ್ದಾರೆ.
ಇನ್ನೂ ಇದೊಂದು ಸೈಬರ್ ವಾರ್ ಯಾಕಿರಬಾರದು? ಎಂದು ಪ್ರಶ್ನಿಸಿರುವ ಅವರು ಹೆಲಿಕಾಫ್ಟರ್ ಮೇಲೆ ಲೇಸರ್ ದಾಳಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಚೀನಾ ಬೆದರಿಕೆ ಒಡ್ಡುತ್ತಿದ್ದಂತೆಯೇ ಲೇಸರ್ ದಾಳಿ ನಡೆಸಿರಬಹುದೇ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದು, ಈ ವಿಚಾರವನ್ನು ನಾವು ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರ ಆಂತರಿಕ ಮತ್ತು ಬಾಹ್ಯ ರಕ್ಷಣೆ ಕುರಿತು ಹೆಚ್ಚು ಲಕ್ಷ್ಯ ವಹಿಸಬೇಕಿದೆ ಎಂದು ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸೇನಾ ಹೆಲಿಕಾಫ್ಟರ್ ಪತನ ಹಿನ್ನೆಲೆ: ಹುಟ್ಟುಹಬ್ಬ ಆಚರಣೆ ರದ್ದುಗೊಳಿಸಿದ ಸೋನಿಯಾ ಗಾಂಧಿ
ಮೀನುಗಾರ ಮಹಿಳೆಯನ್ನು ಅವಮಾನಿಸಿ ಬಸ್ ನಿಂದ ಬಲವಂತವಾಗಿ ಇಳಿಸಿದ ಕಂಡೆಕ್ಟರ್: ತಮಿಳುನಾಡು ಸಿಎಂ ಮಾಡಿದ್ದೇನು ಗೊತ್ತಾ?
ಸೇನಾ ವಿಮಾನ ಪತನ: 14 ಮಂದಿಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಇವರೊಬ್ಬರೇ…
ಸೇನಾ ಹೆಲಿಕಾಫ್ಟರ್ ಪತನ: ಬಿಪಿನ್ ರಾವತ್ ಪತ್ನಿ ಮಧುಲಿಕಾ ಮೃತ್ಯು?, ಬಿಪಿನ್ ರಾವತ್ ಸ್ಥಿತಿ ಗಂಭೀರ!
ಮೊಟ್ಟೆ ಯೋಜನೆ ಕೈ ಬಿಡದಿದ್ದರೆ, ಬೀದಿಗಿಳಿದು ಹೋರಾಟ: ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟ