ನೇತ್ರಾವತಿ ಸೇತುವೆ ಬಳಿ ಎರಡು ಬಸ್, ಕಾರಿನ ನಡುವೆ ಸರಣಿ ಅಪಘಾತ
ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕರ ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡಿನ ನೇತ್ರಾವತಿ ಸೇತುವೆ ಬಳಿ ನಡೆದಿದೆ.
ಬಿ.ಸಿ.ರೋಡಿನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜೀಪ ರೂಟ್ ನ ಶಾರದ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಘಟನೆಯಲ್ಲಿ ಬಸ್ ಚಾಲಕರು ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 8 ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಇದೇ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಬಸ್ ಗೆ ಡಿಕ್ಕಿಯಾಗಿದ್ದು ಯಾವುದೇ ಅಪಾಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಲಭ್ಯವಾಗಿಲ್ಲ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾಗಿತ್ತು. ಕ್ರೇನ್ ಮೂಲಕ ಬಸ್ ಗಳನ್ನು ಸ್ಥಳದಿಂದ ಬದಿಗೆ ಸರಿಸಿದ ಬಳಿಕ ಸಂಚಾರಕ್ಕೆ ಅನುಕೂಲವಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw