ಮೇ 22 ರಿಂದ ಮೂರು ದಿನಗಳ ಕಾಲ ಅಧಿವೇಶನ, ಹಂಗಾಮಿ ಸಭಾಧ್ಯಕ್ಷರಾಗಿ ಆರ್.ವಿ.ದೇಶಪಾಂಡೆ
ಬೆಂಗಳೂರು: ಇದೇ ಸೋಮವಾರ ಮೇ 22 ರಿಂದ ಬುಧವಾರ ಮೇ 24 ರವರೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮೂರು–ದಿನಗಳ ಕಾಲ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ರಾಜ್ಯಪಾಲರ ಅನುಮತಿ ಕೋರಿದ್ದು, ಈ ಅಧಿವೇಶನದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
ಸದನದ ಅತ್ಯಂತ ಹಿರಿಯ ಸದಸ್ಯ ಆರ್.ವಿ.ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ( ಪ್ರೊ ಟರ್ಮ್ ಸ್ಪೀಕರ್ ಆಗಿ ) ಕಾರ್ಯ ನಿರ್ವಹಿಸುವಂತೆ ವಿನಂತಿಸಲಾಗಿದ್ದು ಸೋಮವಾರವೇ ನೂತನ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಪ್ರಸ್ತುತ ಸ್ದಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಗಳನ್ನು ಸನ್ನಿಹಿತದಲ್ಲಿಯೇ ಪುನರಾರಂಭ ಮಾಡಲಾಗುವುದು ಎಂದೂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಘೋಷಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw