7 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್
ರಾಯಚೂರು: 7 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.
2ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ನಿತ್ಯ ಸ್ಕೂಲ್ ಬಸ್ ನಲ್ಲಿ ಶಾಲೆಗೆ ಬರುತ್ತಿದ್ದಳು.ಈ ವೇಳೆ ಈ ವೇಳೆ ಆರೋಪಿಯು ಬಾಲಕಿಯನ್ನು ಹೊರಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ಬೆನ್ನಲ್ಲೇ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಅದೇ ಗ್ರಾಮದ ಶಿವನಗೌಡ ಎಂದು ಗುರುತಿಸಲಾಗಿದೆ.
ಇನ್ನೂ ಬಾಲಕಿಯನ್ನು ಮಾಹಿತಿ ನೀಡದೇ ಅಪರಿಚಿತನೊಂದಿಗೆ ಕಳುಹಿಸಿದ ಹಿನ್ನೆಲೆ ಶಾಲಾ ವ್ಯವಸ್ಥಾಪಕನ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಶಾಲಾ ವ್ಯವಸ್ಥಾಪಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ನೊಂದ ಬಾಲಕಿಯನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: