ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಮಹೇಶ್ ಭಟ್ ಬಂಧನಕ್ಕೆ ಎಸ್ ಪಿಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ದಲಿತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಿ, ಆರೋಪಿಯನ್ನು ಬಂಧಿಸಬೇಕು ಎಂದು ವಿವಿಧ ಸಂಘಟನೆಗಳ ನಿಯೋಗ ಇಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿಯನ್ನು ಭೇಟಿ ಮಾಡಿ ಮನವಿ ಮಾಡಿದೆ.
ಡಿವೈಎಫ್ ಐ, ಡಿಎಚ್ ಎಸ್, ಜೆಎಂೆಸ್, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಎಸ್ ಎಫ್ ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಗಳ ಮುಖಂಡರ ನಿಯೋಗ ಗುರುವಾರ ಎಸ್ ಪಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಆರೋಪಿ ಮಹೇಶ್ ಭಟ್ ಎಂಬಾತನ ವಿರುದ್ಧ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಈವರೆಗೂ ಆರೋಪಿಯನ್ನು ಬಂಧಿಸದೇ ಇರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಈ ಘಟನೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ. ಹೀಗಾಗಿ ತಕ್ಷಣವೇ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಬಂಧಿಸಿ ಸಮಗ್ರ ತನಿಖೆಗೊಳಪಡಿಸಬೇಕು ಎಂದು ಒತ್ತಾಯಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7