ಕುಸ್ತಿ ಫೆಡರೇಶನ್ ಮುಖ್ಯಸ್ಥನ ವಿರುದ್ಧ ಲೈಂಗಿಕ ಕಿರುಕುಳ, ಪೋಕ್ಸೋ ಕಾಯ್ದೆಯಡಿ 2 ಎಫ್ ಐಆರ್ ದಾಖಲು
ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಶೋಷಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು 2 ಎಫ್ ಐಆರ್ ದಾಖಲಿಸಿದ್ದಾರೆ.
ಆರು ದಿನಗಳಿಂದಲೂ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಮಹಿಳಾ ಕುಸ್ತಿಪಟುಗಳು 2 ಎಫ್ ಐಆರ್ ದಾಖಲಿಸಿದ್ದಾರೆ ಎಂದು ಡಿಸಿಪಿ ಪ್ರಣವ್ ತಯಾಲ್ ತಿಳಿಸಿದ್ದಾರೆ.
ಪ್ರಸ್ತುತ ದಾಖಲಾಗಿರುವ ಎರಡು ಪ್ರಕರಣಗಳ ಪೈಕಿ ಒಂದು ಎಫ್ ಐಆರ್ ಅಪ್ರಾಪ್ತ ವಯಸ್ಸಿನ ಸಂತ್ರಸ್ತೆಯ ಆರೋಪಗಳಾಗಿದ್ದು, ಪೋಕ್ಸೋ ಕಾಯ್ದೆ ವ್ಯಾಪ್ತಿಯಲ್ಲಿದೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw