ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ ಕರ್ನಾಟಕ ದಸಂಸ

ಮಂಗಳೂರು: ಬಂಟ್ವಾಳ ತಾಲೂಕು ವಿಟ್ಲ ಠಾಣಾ ವ್ಯಾಪ್ತಿಯ ಅಪ್ರಾಪ್ತ ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ ಈವರೆಗೆ ಈವರೆಗೂ ಆರೋಪಿಯನ್ನು ಬಂಧಿಸದೇ ಇರುವುದು ಪೊಲೀಸರ ಮೇಲೆ ಅನುಮಾನ ಮೂಡಿಸುವಂತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ –ದ.ಕ. ಜಿಲ್ಲಾ ಸಮಿತಿ ಅನುಮಾನ ವ್ಯಕ್ತಪಡಿಸಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಪೊಲೀಸರು ಪ್ರಕರಣದ ಆರೋಪಿಯನ್ನು ಇದುವರೆಗೂ ಬಂಧಿಸದೆ, ಆರೋಪಿಗೆ ಜಾಮೀನು ಸಿಗುವ ತನಕ ಪರೋಕ್ಷವಾಗಿ ಬೆಂಬಲಿಸುತ್ತಿದ್ದಾರೆ ಎಂಬ ಬಗ್ಗೆ ಅನುಮಾನವಿದೆ ಎಂದರು.
ಪ್ರಕರಣದ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಹಾಗೂ ಘಟನೆಯ ಬಗ್ಗೆ ನಿಷ್ಪಕ್ಷವಾಗಿ ತನಿಖೆ ನಡೆಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ ದ. ಕ ಜಿಲ್ಲಾ ಸಮಿತಿ ಇದೇ ವೇಳೆ ಒತ್ತಾಯಿಸಿತು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕರಾದ ಸದಾಶಿವ ಪಡುಬಿದ್ರಿ, ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ, ಜಿಲ್ಲಾ ಖಜಾಂಚಿ ನಾಗೇಶ್ ಚಿಲಿಂಬಿ, ಸಂಘಟನಾ ಸಂಚಾಲಕರಾದ ಕೃಷ್ಣಾನಂದ.ಡಿ., ದಲಿತ ಕಲಾ ಮಂಡಳಿ ಜಿಲ್ಲಾ ಸಂಚಾಲಕರಾದ ಕಮಲಾಕ್ಷ ಬಜಾಲ್, ಮಂಗಳೂರು ತಾಲೂಕು ಸಂಚಾಲಕರಾದ ರಾಘವೇಂದ್ರ. ಎಸ್. ಪೇಜಾವರ ಪಡ್ಪು, ಸಂಘಟನಾ ಸಂಚಾಲಕರಾದ ರುಕ್ಕಯ್ಯ ಕರಂಬಾರು ಮುಂತಾದವರು ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: