ಮುರ್ಶಿದಾಬಾದ್ ಹಿಂಸಾಚಾರದ ವೇಳೆ ಲೈಂಗಿಕ ಕಿರುಕುಳ: ತನಿಖೆಗೆ ಸಮಿತಿ ರಚನೆ

16/04/2025
ನವದೆಹಲಿ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ವೇಳೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ತನಿಖೆ ಕೈಗೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯೂ) ತನಿಖಾ ಸಮಿತಿಯನ್ನು ರಚಿಸಿದೆ.
ಎನ್ಸಿಡಬ್ಲ್ಯೂ ಅಧ್ಯಕ್ಷೆ ವಿಜಯಾ ಕಿಶೋರ್ ರಹತ್ಕರ್ ಈ ಘಟನೆ ಸಂಬಂಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.
ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಸಂತ್ರಸ್ತರನ್ನು ಭೇಟಿ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆಯಲು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಎನ್ಸಿಡಬ್ಲ್ಯೂ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: