ಶಬರಿಮಲೆಗೆ ತೆರಳಿದ ಕರ್ನಾಟಕದ ಟಿಟಿ ವಾಹನ ಅಪಘಾತ: ಮೂವರ ಸಾವು, 11 ಮಂದಿಗೆ ಗಾಯ - Mahanayaka
11:43 AM Wednesday 12 - March 2025

ಶಬರಿಮಲೆಗೆ ತೆರಳಿದ ಕರ್ನಾಟಕದ ಟಿಟಿ ವಾಹನ ಅಪಘಾತ: ಮೂವರ ಸಾವು, 11 ಮಂದಿಗೆ ಗಾಯ

tt vahana1
15/02/2022

ತಿರುವನಂತಪುರಂ: ಶಬರಿಮಲೆ ದೇವರ ದರ್ಶನಕ್ಕೆ ತೆರಳಿದ ಕರ್ನಾಟಕದ ಟಿಟಿ ವಾಹನವೊಂದು ಅಪಘಾತಕ್ಕಿಡಾಗಿ ಮೂವರು ಸಾವನ್ನಪ್ಪಿರುವ ಘಟನೆ ಕೇರಳದ ಕೋಝಿಕ್ಕೋಡ್‍ನ ಪುರಕ್ಕಾಟ್ಟಿರಿಯಲ್ಲಿ ನಡೆದಿದೆ.

ಶಬರಿ ಮಲೆಗೆ ತೆರಳುತ್ತಿದ್ದ ಕರ್ನಾಟಕ ಮೂಲದ ಭಕ್ತರ ಟಿಟಿ ವಾಹನ ಪುರಕ್ಕಾಟ್ಟಿರಿಯ ಪುಲದಿಕುನ್ನು ಬೈಪಾಸ್ ಬಳಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮರಣ ಹೊಂದಿದ್ದು 11 ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರನ್ನು ಕರ್ನಾಟಕ ಮೂಲದ ಶಿವಣ್ಣ ಮತ್ತು ನಾಗರಾಜ ಎಂದು ಗುರುತಿಸಲಾಗಿದ್ದು, ಟಿಪ್ಪರ್ ಚಾಲಕ ಎರ್ನಾಕುಲಂ ಮೂಲದವರಾಗಿದ್ದಾರೆ ಎನ್ನಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹುಟ್ಟುಹಬ್ಬದಂದೇ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕಿ ಸಾವು

ಬಾಲಕಿ ಮೇಲೆ 16 ಮಂದಿಯಿಂದ ಸಾಮೂಹಿಕ ಅತ್ಯಾಚಾರ

ಕುಡಿದ ಮತ್ತಿನಲ್ಲಿ ಮೊಬೈಲ್​ಗಾಗಿ ಜಗಳ: ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಹುಟ್ಟಿ 6 ತಿಂಗಳಿಗೇ ಮೃತಪಟ್ಟ ಮಗು: ನೊಂದ ತಾಯಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ