ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಶಾಲಾ ಕಟ್ಟಡದಿಂದ ಹಾರಿದ ಬಾಲಕಿ!
ಒಡಿಶಾ: ಸಾಮೂಹಿಕ ಅತ್ಯಾಚಾರ ಮಾಡಲು ಯತ್ನಿಸಿದವರಿಂದ ತಪ್ಪಿಸಿಕೊಳ್ಳಲು ಬಾಲಕಿ ಶಾಲಾ ಕಟ್ಟಡದಿಂದ ಜಿಗಿದ ಘಟನೆ ಒಡಿಶಾದ ಜಾಜ್ ಪುರದಲ್ಲಿ ನಡೆದಿದ್ದು, ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ.
ಭಾನುವಾರ ಸಂಜೆ ಈ ಘಟನೆ ನಡೆದಿದೆ. ಸಂತ್ರಸ್ತೆ ತನ್ನ ಕಿರಿಯ ಸಹೋದರನೊಂದಿಗೆ ಕಲಿಯಪಾಣಿಯಲ್ಲಿರುವ ತನ್ನ ಸಹೋದರಿಯ ಮನೆಗೆ ಹೋಗುತ್ತಿದ್ದಳು. ಐವರು ಯುವಕರು ಅವರನ್ನು ತಡೆದು ಪಕ್ಕದ ಶಾಲೆಯ ಟೆರೇಸ್ ಗೆ ಎಳೆದೊಯ್ದಿದ್ದಾರೆ. ಬಳಿಕ ತಡರಾತ್ರಿ ವೇಳೆ ಸಂತ್ರಸ್ತೆಯ ಸಹೋದರನನ್ನು ಬರ್ಬರವಾಗಿ ಥಳಿಸಿದ್ದಾರೆ. ನಂತರ ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.
ಅತ್ಯಾಚಾರ ಯತ್ನವನ್ನು ತಡೆಯಲು ಬಾಲಕಿ ತೆರಸಿನಿಂದ ಜಿಗಿದಿದ್ದಾಳೆ. ಸಹಾಯಕ್ಕಾಗಿ ಸಹೋದರನ ಕೂಗು ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka