ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಪುನಾರಂಭಿಸಿ: ಕೇಂದ್ರಕ್ಕೆ ಸೋನಿಯಾ ಗಾಂಧಿ ಒತ್ತಾಯ

soniya gandhi
24/03/2022

ನವದೆಹಲಿ: ಕೋವಿಡ್-19 ರೋಗದ ಕಾರಣದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ನಿಲ್ಲಿಸಲಾಗಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪುನರಾರಂಭಿಸುವಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲೋಕಸಭೆಯ ಚರ್ಚೆ ವೇಳೆ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ಶಾಲೆಗಳನ್ನು ಮುಚ್ಚುವುದರ ಜೊತೆಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯನ್ನೂ ನಿಲ್ಲಿಸಲಾಗಿತ್ತು.

ಕಳೆದ ವರ್ಷ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪಿಎಂ-ಪೋಷನ್ ಎಂಬ ಹೆಸರಿನ ಮೂಲಕ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಒದಗಿಸಲಾಗುತ್ತಿತ್ತು. ಇದು ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, ಇದರಿಂದ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಬಹಳ ಪ್ರಯೋಜನವಾಗುತ್ತಿತ್ತು. ಕೊರೊನಾ ಲಾಕ್‍ಡೌನ್ ವೇಳೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಮಧ್ಯಾಹ್ನದ ಊಟ ಯೋಜನೆ ಸಹಕಾರಿಯಾಗಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಮತನಡಿದ ಅವರು, ಮೂರು ವರ್ಷದೊಳಗಿನ ಮಕ್ಕಳು, ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರಿಗೆ ಅಂಗನವಾಡಿಗಳ ಮೂಲಕ ಬಿಸಿಯೂಟವನ್ನು ನೀಡಬೇಕು. 2019-21ರ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ, 2015-16ರ ಸಮೀಕ್ಷೆಗೆ ಹೋಲಿಸಿದರೆ, ಇತ್ತೀಚಿನ ವರ್ಷಗಳಲ್ಲಿ ಪೋಷಕಾಂಶ ಮತ್ತು ಬೆಳವಣಿಗೆಯಿಂದ ಬಳಲುತ್ತಿರುವ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಶೇಕಡಾವಾರು ಹೆಚ್ಚಾಗಿದೆ. ಇದು ಸಾಕಷ್ಟು ಆತಂಕಕಾರಿ ವಿಚಾರವಾಗಿರುವುದರಿಂದ ಸರ್ಕಾರವು ಮಧ್ಯಪ್ರವೇಶಿಸಬೇಕು ಎಂದು ಸೋನಿಯಾ ಗಾಂಧಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು 

ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ವಿಚಾರ: ಕಾಂಗ್ರೆಸ್ ನ ಬಂಡವಾಳ ಬಯಲು ಮಾಡಿದ ಮಾಧುಸ್ವಾಮಿ

ವಿಷಪೂರಿತ ಮಿಠಾಯಿ ಸೇವಿಸಿ ನಾಲ್ವರು ಮಕ್ಕಳ ದಾರುಣ ಸಾವು

ಹಾಸನದ ‘ರಾಜೀವ್ ಆಸ್ಪತ್ರೆ’ಯಲ್ಲಿ ಮಾರ್ಚ್ 25ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕೋವಿಡ್-19 ಲಸಿಕೆ ಕಡ್ಡಾಯಗೊಳಿಸಿಲ್ಲ: ಸುಪ್ರೀಂ ಕೋಟ್‌ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಇತ್ತೀಚಿನ ಸುದ್ದಿ

Exit mobile version