ನೀರಿನ ಟ್ಯಾಪ್’ನ್ನೂ ಬಿಡದ ಕಳ್ಳರು!: ಶಾಲೆಗೆ ನುಗ್ಗಿ ಸಾವಿರಾರು ರೂ. ಮೌಲ್ಯದ ನಗದು, ವಸ್ತುಗಳ ಕಳವು
07/10/2022
ಬಿದ್ಕಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲರ ಕೊಠಡಿಯ ಕಪಾಟಿನಲ್ಲಿದ್ದ 60 ಸಾವಿರ ನಗದು, ಮೊಬೈಲ್ ಹಾಗೂ ಸ್ಕೂಲ್ ನ ನೀರಿನ ಟ್ಯಾಪ್ ಗಳನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ.
ಹಾಗೆಯೇ ಸ್ಕೂಲ್ ನ ಕಚೇರಿಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ ಕಪಾಟಿನಲ್ಲಿದ್ದ ದಾಖಲಾತಿಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka