ಶಂಕರ್ ನಾಗ್ ಕನಸು ನನಸು ಮಾಡುತ್ತೇವೆ: ಸಿಎಂ ಬೊಮ್ಮಾಯಿ
ಚಿಕ್ಕಬಳ್ಳಾಪುರ: ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆಗಬೇಕು ಎನ್ನುವ ಅಭಿಲಾಷೆಯಿಂದ ನಮ್ಮ ಪ್ರಧಾನಿಗಳು ನಿಯಮ ಸರಳಿಕರಣಗೊಳಿಸಿದ್ದರಿಂದ, ಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಚಿಕ್ಕಬಳ್ಳಾಪುರ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಅಭಿವೃದ್ಧಿ ಮಾಡಲಾಗಿದೆ. ರಾಮನಗರದಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು ಎಂದರು.
ಶಂಕರ್ ನಾಗ್ ಕನಸು ನನಸು:
ನಂದಿಬೆಟ್ಟಕ್ಕೆ ರೋಪ್ ವೇ ಆಗಬೇಕೆಂದು ದಿವಂಗತ ನಟ ಶಂಕರನಾಗ್ ಅವರು ಕಂಡ ಕನಸು ಈಗ ನನಸಾಗುತ್ತಿದೆ. ರೋಪ್ ವೇ ಮಾಡಿದರೆ ಪ್ರವಾಸೋದ್ಯಮಕ್ಕೆ ಸಾಕಷ್ಟು ಅನುಕುಲವಾಗುತ್ತದೆ. ಈ ಭಾಗದಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿವೆ. ನಂದಿ ಬೆಟ್ಟದ ಪಕ್ಕದ ದೇವಸ್ಥಾನ ಅಭಿವೃದ್ಧಿ ಆಗುತ್ತದೆ. ಆದ್ದರಿಂದ ಇದೊಂದು ಪ್ರವಾಸಿ ಸರ್ಕಿಟ್ ಆಗಲು ಅನುಕೂಲವಾಗಲಿದೆ ಎಂದರು.
ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ:
ನಮ್ಮ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ ಮೂಡಿದೆ. ಇದರಿಂದ ನಮ್ಮಆತ್ಮವಿಶ್ವಾಸ ಹೆಚ್ಚಾಗಿದೆ. ಅಮಿತ್ ಶಾ ಅವರ ಸಭೆಯಲ್ಲಿ ಪ್ರಣಾಳಿಕೆಯ ಬಗ್ಗೆ ಚರ್ಚೆ ಮಾಡಿದ್ದೇವೆ. ಆರೋಗ್ಯ ಸಚಿವ ಸುಧಾಕರ್ ಅವರು ಪ್ರಾಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದಾರೆ. ಈ ಬಾರಿ ನಮ್ಮದು ಜನತಾ ಪ್ರಣಾಳಿಕೆಯಾಗಲಿದೆ ಎಂದರು.
ಮೀಸಲಾತಿ :ಕಾಂಗ್ರೆಸ್ ಗೆ ಸಹಿಸಲಾಗುತ್ತಿಲ್ಲ:
ಮೀಸಲಾತಿ ಹೆಚ್ಚಳ ಮಾಡಿರುವುದು ಕಾಂಗ್ರೆಸ್ ನವರಿಗೆ ಸಹಿಸಲಿಕ್ಕೆ ಆಗುತ್ತಿಲ್ಲ. ಹೀಗಾಗಿ ಅವರು ವಿರೋಧ ಮಾಡುತ್ತಿದ್ದಾರೆ. ನಾವು ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆಯೋ ಅದನ್ನು ವಿರೋಧಿಸುತ್ತೇವೆ ಎಂದು ಹೇಳಲಿ.
ಮುಸ್ಲಿಮರಿಗೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಅವರನ್ನು ಇಡಬ್ಲುಎಸ್ ವರ್ಗದಲ್ಲಿ ಸೇರಿಸಿದ್ದೇವೆ. ಅಲ್ಲಿ ಶೆ 10% ಮೀಸಲಾತಿ ಇದೆ. ನಮ್ಮ ಸಂವಿಧಾನದಲ್ಲಿ ಧಾರ್ಮಿಕ ಆಧಾರದಲ್ಲಿ ಮಿಸಲಾತಿ ಇಲ್ಲ. ಮುಸ್ಲೀಮರಿಗೆ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw