ಖ್ಯಾತ ಸಮಾಜ ಸೇವಕಿ, ಪದ್ಮಶ್ರೀ ಪುರಸ್ಕೃತೆ ಶಾಂತಿ ದೇವಿ ವಿಧಿವಶ
ಒಡಿಶಾ: ಖ್ಯಾತ ಸಮಾಜ ಸೇವಕಿ ಹಾಗೂ ಪದ್ಮಶ್ರೀ ಪುರಸ್ಕೃತೆ ಶಾಂತಿ ದೇವಿ ಅವರು ನಿನ್ನೆ ರಾತ್ರಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಶಾಂತಿ ದೇವಿ (88) ಅವರಿಗೆ ಎದೆನೋವು ಕಾಣಿಸಿಕೊಂಡು ಪ್ರಜ್ಞಾಹೀನರಾಗಿ ನಿನ್ನೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಶಾಂತಿ ದೇವಿಯವರು ಮುಖ್ಯವಾಗಿ ಬುಡಕಟ್ಟು ಹೆಣ್ಣು ಮಕ್ಕಳ ಅಭಿವೃದ್ಧಿ ಮತ್ತು ಶಿಕ್ಷಣಕ್ಕಾಗಿ ಶ್ರಮಿಸಿದರು. ರಾಯಗಡ ಜಿಲ್ಲೆಯ ಪದ್ಮಾಪುರ ಬ್ಲಾಕ್‌ನ ಜಬರ್‌ಗುಡದಲ್ಲಿ ಕುಷ್ಠ ರೋಗಿಗಳಿಗಾಗಿ ಆಶ್ರಮ ಸ್ಥಾಪಿಸಿದ್ದರು. ಹಲವಾರು ಗಾಂಧಿವಾದಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದರು.
ಇವರ ಸಮಾಜ ಸೇವೆಗೆ ಪದ್ಮಶ್ರೀ ಪ್ರಶಸ್ತಿ, ಜಮುನಾಲಾಲ್ ಬಜಾಜ್ ಪ್ರಶಸ್ತಿ, ರಾಧಾನಾಥ್ ರಥ್ ಶಾಂತಿ ಪ್ರಶಸ್ತಿ ಸೇರಿ ಅನೇಕ ರಾಜ್ಯ ಮಟ್ಟದ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬ್ರಿಟಿಷ್ ಕಾಲದ ಬಂಗಲೆಯಲ್ಲಿ ಕಚೇರಿ ತೆರೆದ ಸಚಿವ ಎಸ್.ಅಂಗಾರ
ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಣೆ: ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು; ಸಿದ್ಧರಾಮಯ್ಯ
ಒತ್ತಾಯಪೂರ್ವಕವಾಗಿ ಯಾರಿಗೂ ಕೋವಿಡ್-19 ಲಸಿಕೆ ನೀಡುವುದಿಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಸ್ಪಷ್ಟನೆ
ಖ್ಯಾತ ಕಥಕ್ ನೃತ್ಯಗಾರ ಪಂಡಿತ್ ಬಿರ್ಜು ಮಹಾರಾಜ್ ಹೃದಯಾಘಾತದಿಂದ ನಿಧನ
ಶಬರಿಮಲೆ ಬೆಟ್ಟ ಹತ್ತುತ್ತಿದ್ದ ವೇಳೆ ಅಯ್ಯಪ್ಪ ಮಾಲಾಧಾರಿ ಹೃದಯಾಘಾತದಿಂದ ಸಾವು