ಧನಾತ್ಮಕ ಯೋಚನೆಯೊಂದಿಗೆ ಬದುಕು ರೂಪಿಸಿಕೊಳ್ಳಿ: ಕೆ.ಜಯಪ್ರಕಾಶ್ ಹೆಗ್ಡೆ
ಉಡುಪಿ: ನಾವು ಹಿಂದುಳಿದಿದ್ದೇವೆ ಎಂಬ ಮನ:ಸ್ಥಿತಿಯಿಂದ ಹೊರಬಂದು ವಿದ್ಯಾವಂತರಾಗಿ ಧನಾತ್ಮಕ ಯೋಚನೆ, ಯೋಜನೆಗಳೊಂದಿಗೆ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ಅವರು ನಗರದ ಅಂಬಲಪಾಡಿಜಿಲ್ಲಾ ಸವಿತಾ ಸಮಾಜ ಸಮುದಾಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸವಿತಾ ಸಮಾಜ ಉಡುಪಿ ಇವರ ಸಹಯೋಗದಲ್ಲಿ ನಡೆದ ಸವಿತಾ ಮಹರ್ಷಿಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಹಿಂದುಳಿದ ವರ್ಗಗಳ ಆಯೋಗದವತಿಯಿಂದಸವಿತಾ ಸಮುದಾಯಕ್ಕೆ ಸದಾ ಸಹಕಾರನೀಡುವುದಾಗಿ ತಿಳಿಸಿದರು.ಉಡುಪಿ ಜಿಲ್ಲಾ ಸವಿತಾ ಸಮಾಜದಗೌರವಾಧ್ಯಕ್ಷ ಬನ್ನಂಜೆಗೋವಿAದ ಭಂಡಾರಿಪ್ರಾಸ್ತಾವಿಕವಾಗಿ ಮಾತನಾಡಿದರು.ಜಿಲ್ಲಾ ಸವಿತಾ ಸಮಾಜದ ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರಕುರ್ಕಾಲು ಸವಿತಾ ಮಹರ್ಷಿಗಳ ಬಗ್ಗೆ ಉಪನ್ಯಾಸ ನೀಡಿದರು.
ಕುಂದಾಪುರತಾಲೂಕು ಸವಿತಾ ಸಮಾಜದಅಧ್ಯಕ್ಷ ಸುಭಾಸ್ ಭಂಡಾರಿಗುಜ್ಜಾಡಿ, ಕಾರ್ಕಳ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ನಾಗೇಶ್ ಭಂಡಾರಿ ಬಜೆಗೋಳಿ, ಬ್ರಹ್ಮಾವರ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಶಿವರಾಮ್ ಭಂಡಾರಿ ಹಂದಾಡಿ, ಹೆಬ್ರಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಸುರೇಶ್ ಭಂಡಾರಿ ಹೆಬ್ರಿ, ಕಾಪು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ವಿನಯ್ ಭಂಡಾರಿ ಪಡುಬಿದ್ರೆ,ಸವಿತಾ ಸಮಾಜ ಸೌಹಾರ್ದ ಸಹಕಾರಿಯಅಧ್ಯಕ್ಷನವೀನ್ಚಂದ್ರ ಭಂಡಾರಿ ಹಾಗೂ ಮತ್ತಿತರರುಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಮಂಜುನಾಥ್ ಭಂಡಾರಿ ನಿರೂಪಿಸಿದರು. ಉಡುಪಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ರಾಜು ಭಂಡಾರಿ ಕಿನ್ನಿಮುಲ್ಕಿ ವಂದಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw