ಶಾರದೋತ್ಸವದ ಫ್ಲೆಕ್ಸ್ ಹರಿದ ಮೂವರು ಆರೋಪಿಗಳ ಬಂಧನ
ವಾಮಂಜೂರು ಜಂಕ್ಷನ್ ನಲ್ಲಿ ಶಾರದೋತ್ಸವದ ಫ್ಲೆಕ್ಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ. ಅಲ್ಲದೇ ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಕೃತ್ಯಕ್ಕೆ ಬಳಸಲಾದ ಕಾರು
ಅಕ್ಟೋಬರ್ 8 ರಂದು ಮಧ್ಯರಾತ್ರಿ ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ಈ ಮೂವರು ಹರಿದು ಹಾಕಿ ಧಾರ್ಮಿಕ ಭಾವನೆಗಳಿಗೆ ಅನುಮಾನಗೊಳಿಸುವ ಉದ್ದೇಶದಿಂದ ಕೃತ್ಯವನ್ನು ಎಸಗಿದ್ದರು. ಇವರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka