ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಎಫ್ ಐ ಆರ್ ದಾಖಲು
31/01/2021
ಬೆಂಗಳೂರು: ಶಾಸಕ ಶರತ್ ಬಚ್ಚೇಗೌಡ ಸೇರಿದಂತೆ 15 ಜನರ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಎಫ್ ಐ ಆರ್ ದಾಖಲಾಗಿದೆ.
ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. . ಶಿಷ್ಟಾಚಾರ ಉಲ್ಲಂಘನೆ ಮಾಡಿ ಎಂಟಿಬಿ ಗುದ್ದಲಿ ಪೂಜೆ ಮಾಡಿದ್ದಾರೆ ಎಂದು ಆರೋಪಿಸಿ ಹೊಸಕೋಟೆ ನಗರದಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು ಈ ವೇಳೆ ಲಾಠಿ ಚಾರ್ಜ್ ನಡೆಸಲಾಗಿತ್ತು.
ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಕ್ರಮವನ್ನು ವಿರೋಧಿಸಿ ಶರತ್ ಬಚ್ಚೇಗೌಡ ಬೆಂಬಲಿಗರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿ ಶರತ್ ಬಚ್ಚೇಗೌಡ ಸೇರಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.