ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲವೆಬ್ಬಿಸಿದ ಅದಾನಿ ಕಂಪೆನಿಗಳ ಷೇರು ಮೌಲ್ಯ ಕುಸಿತ ವಿಚಾರ
ನವದೆಹಲಿ: ಹಿಂಡನ್ ಬರ್ಗ್ ವರದಿ ಬಳಿಕ ಅದಾನಿ ಸಮೂಹ ಕಂಪೆನಿಗಳ ಷೇರು ಮೌಲ್ಯ ಕುಸಿತ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವಂತೆ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲೂ ಗದ್ದಲವೆಬ್ಬಿಸಿದ್ದು, ಈ ಹಿನ್ನೆಲೆಯಲ್ಲಿ ಸದನವನ್ನು ಮುಂದೂಡಲಾಗಿದೆ.
ಅದಾನಿ ಸಮೂಹ ಕಂಪೆನಿಗಳ ಷೇರು ಮೌಲ್ಯ ಕುಸಿದಿದ್ದು, ಭಾರತೀಯ ಹೂಡಿಕೆದಾರರಿಗೆ ಎದುರಾಗಿರುವ ಅಪಾಯದ ಕುರಿತಂತೆ ಚರ್ಚಿಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿದವು.
ಅದಾನಿ ಸಮೂಹ ಕಂಪೆನಿಗಳ ಷೇರು ಮೌಲ್ಯ ಕುಸಿತ ವಿಚಾರ ಚರ್ಚೆಗೆ ಕೈಗೆತ್ತಿಕೊಳ್ಳಲು ಹೇಳುತ್ತಿದ್ದಂತೆಯೇ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ತೀವ್ರ ಗದ್ದಲ ಸೃಷ್ಟಿಯಾಯಿತು. ಹೀಗಾಗಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw