ಶಾಸಕ ಪ್ರಿಯಾಂಕ್‌ ಖರ್ಗೆ ಪತ್ನಿಯ ಮೊಬೈಲ್‌ ಕಳವು: ಇಬ್ಬರು ಆರೋಪಿಗಳ ಬಂಧನ - Mahanayaka

ಶಾಸಕ ಪ್ರಿಯಾಂಕ್‌ ಖರ್ಗೆ ಪತ್ನಿಯ ಮೊಬೈಲ್‌ ಕಳವು: ಇಬ್ಬರು ಆರೋಪಿಗಳ ಬಂಧನ

crime
15/02/2022

ಬೆಂಗಳೂರು: ವಾಯುವಿಹಾರಕ್ಕೆ ತೆರಳಿದ್ದ ಶಾಸಕ ಪ್ರಿಯಾಂಕ್‌ ಖರ್ಗೆ ಅವರ ಪತ್ನಿ ಶೃತಿ ಅವರ ಮೊಬೈಲ್‌ ಕಸಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸದಾಶಿವನಗರ ಠಾಣಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಶಿವಾಜಿನಗರ ಖಾಜಾ ಮೋಯಿನ್‌(30) ಮತ್ತು ಕಾವಲ್‌ ಬೈರಸಂದ್ರದ ಶೇಕ್‌ ಇಲಿಯಾಜ್‌(25) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ಮೊಬೈಲ್‌ ವಶಕ್ಕೆ ಪಡೆಯಲಾಗಿದೆ.

ಫೆ.6ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಸದಾಶಿವನಗರದ ಅಫಿನಿಟಿ ಜಿಮ್‌ ಬಳಿ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಶೃತಿ ಅವರು ವಾಯುವಿಹಾರ ಹೋಗುತ್ತಿದ್ದರು. ಈ ವೇಳೆ ದ್ವಿಚಕ್ರವಾಹನದಲ್ಲಿ ಬಂದ ಆರೋಪಿಗಳು ಮೊಬೈಲ್‌ ಕಸಿದುಕೊಂಡ ಪರಾರಿಯಾಗಿದ್ದರು.

ಈ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ ಘಟನಾ ಸ್ಥಳದ ಸುತ್ತ-ಮುತ್ತಲ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದಾಗ ಆರೋಪಿಗಳ ಸುಳಿವು ಪತ್ತೆಯಾಗಿತ್ತು. ಈ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆರೋಪಿಯನ್ನು ಕರೆ ತರುತ್ತಿದ್ದಾಗ ಪೊಲೀಸ್‌ ವಾಹನ ಅಪಘಾತ: ಐವರು ಸಾವು

ಹುಟ್ಟಿ 6 ತಿಂಗಳಿಗೇ ಮೃತಪಟ್ಟ ಮಗು: ನೊಂದ ತಾಯಿ ಆತ್ಮಹತ್ಯೆಗೆ ಶರಣು

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಾಯ

ಫೆ. 17ರಂದು ಹಾರಿಹಿತ್ಲು, ರೆಂಜಾಳ ಶ್ರೀ ಸತ್ಯಸಾರಮಾನಿ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಸುದ್ದಿ ಸಂಸ್ಥೆಯ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಖ್ಯಾತ ಪತ್ರಕರ್ತ

ಇತ್ತೀಚಿನ ಸುದ್ದಿ