ಶಾಸಕ ರೇಣುಕಾಚಾರ್ಯ ಪುತ್ರಿಗೆ ಎಸ್‌ಸಿ ಪ್ರಮಾಣ ಪತ್ರ: ಸರಕಾರ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಿ; ಸಿದ್ದರಾಮಯ್ಯ
ಮೈಸೂರು: ಶಾಸಕ ರೇಣುಕಾಚಾರ್ಯ ಪುತ್ರಿಗೆ ಎಸ್ಸಿ ಜಾತಿ ಪ್ರಮಾಣ ಪತ್ರ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಮತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಸರಕಾರ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಅಲ್ಲದೆ, ರೇಣುಕಾಚಾರ್ಯ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಬೇಕು ಒತ್ತಾಯಿಸಿದರು.
ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಮಾತನಾಡಿದ ಅವರು, ರೇಣುಕಾಚಾರ್ಯ ಪ್ರಕರಣವನ್ನು ಸರಕಾರ ಸಮರ್ಥಿಸುವುದು ಕಾನೂನು ಬಾಹಿರ ಕೆಲಸಕ್ಕೆ ಪ್ರೋತ್ಸಾಹ ಕೊಟ್ಟಂತೆ. ಜಂಗಮ ಸಮುದಾಯದ ರೇಣುಕಾಚಾರ್ಯ ತನ್ನ ಪುತ್ರಿಗೆ ಎಸ್ಸಿ ಎಂದು ಪ್ರಮಾಣ ಪತ್ರ ಪಡೆದಿದ್ದನ್ನು ಸರಕಾರ ಸಮರ್ಥಿಸಿದರೆ ಏನು ಮಾಡಬೇಕು ಹೇಳಿ ಎಂದು ಪ್ರಶ್ನಿಸಿದರು.
ಹಿಜಾಬ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಂ ಹೆಣ್ಣು ಮಕ್ಕಳು ದುಪಟ್ಟ ತಲೆಗೆ ಹಾಕಿಕೊಳ್ಳುತ್ತೇನೆ ಎಂದರೆ ಅದರಲ್ಲಿ ತಪ್ಪೇನಿದೆ? ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲ್ವಾ? ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕುತ್ತಾರೆ. ಅದನ್ನು ನೀವು ಪ್ರಶ್ನೆ ಮಾಡುತ್ತೀರಾ ಎಂದರು.
ಬಿಜೆಪಿ ಕೆಲವು ವಿವಾದ ಸೃಷ್ಟಿಸಿ ಮತ ಕ್ರೂಢೀಕರಣ ಮಾಡಲು ಯತ್ನಿಸುತ್ತಿದೆ. ಮುಸ್ಲಿಂಮರಿಗೆ ವ್ಯಾಪಾರಕ್ಕೆ ನಿರ್ಬಂಧ ಹಾಕಿರುವುದು ತಪ್ಪು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ವ್ಯಾಪಾರಕ್ಕೆ ನಿರ್ಬಂಧ ಹಾಕುವುದರ ಹಿಂದೆ ಬಿಜೆಪಿಯ ಅಜೆಂಡಾ ಅಡಗಿದೆ. ಮುಸ್ಲಿಂರಿಗೆ ವ್ಯಾಪಾರ ನಿರ್ಬಂಧ ವಿಚಾರದಲ್ಲಿ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿಲ್ಲ. ಬಿಜೆಪಿಯೇ ಈ ವಿಚಾರದತ್ತ ಇಕ್ಕಟಿಗೆ ಸಿಲುಕಿದೆ. ಹಿಜಾಬ್ ವಿವಾದ ಆಗಲು ಬಿಜೆಪಿ ಕಾರಣ ಎಂದು ಅವರು ಆರೋಪಿಸಿದರು.
ಇಂತಹ ವಿವಾದ ಸೃಷ್ಟಿಸಿ ಅದನ್ನು ಅರಗಿಸಿಕೊಳ್ಳುತ್ತೇವೆ ಎಂದು ಬಿಜೆಪಿ ಎಂದುಕೊಂಡಿದೆ. ಆದರೆ, ಜನ ಬುದ್ದಿವಂತರು. ಜನರಿಗೆ ಬಿಜೆಪಿಯ ತಂತ್ರ ಅರ್ಥವಾಗಿದೆ. ಸಂಘ ಪರಿವಾರದವರು ಅಲ್ಪ ಸಂಖ್ಯಾತರ ಕೊಲೆ ಮಾಡಿದರೆ ಅವರಿಗೆ ಕಡಿಮೆ ಪರಿಹಾರ ಹಣ ಕೊಡುತ್ತಾರೆ. ಮುಸ್ಲಿಂರು ಹಿಂದೂವಿನ ಕೊಲೆ ಮಾಡಿದರೆ ಜಾಸ್ತಿ ಪರಿಹಾರ ಕೊಡುತ್ತಾರೆ. ಇಂತಹ ತಾರತಮ್ಯ ಯಾಕೆ? ಇಂತಹ ವರ್ತನೆಯಿಂದ ಮತ ಕ್ರೂಢೀಕರಣಯಾಗುತ್ತದೆ ಎಂಬ ಬಿಜೆಪಿ ಲೆಕ್ಕ ಉಲ್ಟಾ ಆಗುತ್ತದೆ ನೋಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಘಾತಕಾರಿ ಘಟನೆ: ಸರಕು ಸಾಗಣೆ ಹಡಗಿನಿಂದ ನದಿಗೆ ಬಿದ್ದ12 ಟ್ರಕ್; 10ಕ್ಕೂ ಹೆಚ್ಚು ಮಂದಿ ಸಾವು
ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ: ಮದರಸಾ ಶಿಕ್ಷಣ ಮಂಡಳಿ ತೀರ್ಮಾನ
ದ್ವೇಷ, ಹಿಂಸಾಚಾರ ಹುಟ್ಟುಹಾಕುವ ಉದ್ದೇಶ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಹಿಂದಿದೆ: ಸೀತಾರಾಮ್ ಯೆಚೂರಿ