ಸಮವಸ್ತ್ರ ವಿವಾದ: ಶಾಸಕರ ಎದುರೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು!
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ಸಮವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಸಾಗರ ಶಾಸಕ ಹೆಚ್. ಹಾಲಪ್ಪ ಎದುರೇ ಬಡಿದಾಡಿಕೊಂಡು ಘಟನೆ ವರದಿಯಾಗಿದೆ.
ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸಮವಸ್ತ್ರ ವಿಚಾರಕ್ಕೆ ಸಂಬಂಧಿಸಿದಂತೆ ಹಿಜಾಬ್ ಧರಿಸಬಾರದು ಎಂದು ಒಂದು ಗುಂಪಿನ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಹಾಲಪ್ಪ ಕಾಲೇಜಿಗೆ ಭೇಟಿ ನೀಡಿದ್ದರು ಎನ್ನಲಾಗಿದೆ.
ಈ ವೇಳೆ ಎರಡು ಗುಂಪಿನ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಟ ನಡೆಸಿಕೊಂಡ ಘಟನೆ ನಡೆದಿದೆ ಎನ್ನಲಾಗಿದೆ. ಕಾಲೇಜಿನ ಒಳಭಾಗದಲ್ಲಿ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದರೆ, ಕಾಲೇಜಿನ ಗೇಟಿನ ಎದುರು ಹಿಜಾಬ್ ಪರ ಕೆಲ ವಿದ್ಯಾರ್ಥಿಗಳು ಘೋಷಣೆ ಕೂಗಿದ ಘಟನೆ ನಡೆಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanay
ಇನ್ನಷ್ಟು ಸುದ್ದಿಗಳು
ಸಮವಸ್ತ್ರ ವಿವಾದ: ಮುಂದಿನ 3 ದಿನಗಳ ಕಾಲ ಪ್ರೌಢ ಶಾಲಾ ಕಾಲೇಜುಗಳಿಗೆ ರಜೆ
ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ: ಮದ್ರಸ ಅಧ್ಯಾಪಕ ಅರೆಸ್ಟ್
ಪ್ರತಿಭಟನೆಯ ಬಳಿಕ ಕೇಸರಿ ಪೇಟ ರಾಶಿ ಹಾಕುತ್ತಿರುವ ದೃಶ್ಯ ವೈರಲ್!
ಹಿಜಬ್ ಹಾಕಿಕೊಂಡು ಅಧಿವೇಶನಕ್ಕಲ್ಲ ಮೊದಲು ಮಸೀದಿಗೆ ಹೋಗಿ: ಸಚಿವ ಈಶ್ವರಪ್ಪ