ಸಹೋದರನ ಅತ್ತೆಯ ಕೊಲೆ ಮಾಡಿ ಪರಾರಿಯಾಗಿದ್ದ ಶಶಿಧರ್ ಆತ್ಮಹತ್ಯೆ

ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಭೀಕರ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಬುದ್ದಿ ಹೇಳಿದ ಕಾರಣಕ್ಕೆ ಸಹೋದರನ ಅತ್ತೆ ಯಮುನಾ (65) ಅವರನ್ನು ಶಶಿಧರ್ ಎಂಬ ವ್ಯಕ್ತಿ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದ.
ಕೊಲೆ ಮಾಡಿದ ಬಳಿಕ ಶಶಿಧರ್ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಬಣಕಲ್ ಪೊಲೀಸರು ನಿನ್ನೆ ಮೊದಲು ತನಿಖೆ ಆರಂಭಿಸಿದ್ದರು. ಶಶಿಧರ್ ನನ್ನು ಪತ್ತೆ ಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರೆ, ಇಂದು ಭಾರತೀಬೈಲು ಕಾಫಿತೋಟದಲ್ಲಿ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ದುರ್ಘಟನೆ ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: