ಶೆಟ್ಟರ್ ರಾಜಿನಾಮೆಯಿಂದ ಬಿಜೆಪಿಗೆ ಸ್ವಲ್ಪ ಹಾನಿಯಾಗಲಿದೆ: ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀದಿರುವುದು ನೋವು ಹಾಗೂ ಕಸಿವಿಸಿ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಈ ಭಾಗದ ಹಿರಿಯ ಹಾಗೂ ಪ್ರಮುಖ ನಾಯಕರು. ಪಕ್ಷವು ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದೆ. ನಾನು ಅವರ ವಿರುದ್ದ ಸ್ಪರ್ಧೆ ಮಾಡಿದ್ದೆ. ಮೋದಿ ನೇತೃತ್ವದಲ್ಲಿ ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಕೆ.ಎಸ್. ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶೆಟ್ಟರ್ ಅವರಿಗೆ ದೆಹಲಿ ಮಟ್ಟದಲ್ಲಿ ಇದಕ್ಕಿಂತ ದೊಡ್ಡ ಹುದ್ದೆ ಕೊಡಲಾಗುವುದು ಎಂದು . ಜೆ.ಪಿ.ನಡ್ಡಾ, ಅಮಿತ್ ಶಾ ಅವರು ತಿಳಿಸಿದ್ದರು.
ನಿನ್ನೆಯೂ ಚರ್ಚೆ ಮಾಡಿ, ಅವರು ಹೇಳಿರೋರಿಗೆ ಟಿಕೆಟ್ ಕೊಡಲಾಗುವುದು ಎಂದು ತಿಳಿಸಲಾಯಿತು. ಜಗದೀಶ್ ಶೆಟ್ಟರ್ ಅವರು ಮುಂದುವರಿಸಿಕೊಂಡು ಹೋಗಿದ್ದರೆ ಉತ್ತಮವಾಗಿತ್ತು ಎಂದರು.
ಯಡಿಯೂರಪ್ಪ ನಮಗೆ ಆದರ್ಶರು, ಮುಖ್ಯಮಂತ್ರಿ ಇರೋವಾಗಲೇ ರಾಜಿನಾಮೆ ಕೊಟ್ಟಿದ್ದಾರೆ. ನಮಗೆಲ್ಲ ಪಕ್ಷದ ಆದರ್ಶ ಹೇಳಿಕೊಟ್ಟವರು. ಭಾರತೀಯ ಜನತಾ ಪಕ್ಷ ಎಲ್ಲ ಸಮುದಾಯವನ್ನು ಒಟ್ಟಿಗೆ ಕರೆದುಕೊಂಡು ಹೋಗೋ ಪ್ರಯತ್ನ ನಡೆಸಿದೆ. ಕಲ್ಯಾಣ ಕರ್ನಾಟಕ, ಕಿತ್ತೂರ ಕರ್ನಾಟಕ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಯಡಿಯೂರಪ್ಪ ನೇತೃತ್ವದಲ್ಲಿ ಮೊದಲನೇ ಪೀಳಿಗೆ ಬೆಳದು ನಿಂತಿದೆ. ಎರಡನೆ ಪೀಳಿಗೆಯಲ್ಲಿ ಲಿಂಗಾಯತ ಸಮುದಾಯದ ಸಿ.ಸಿ ಪಾಟೀಲ್, ನಿರಾಣಿ, ಸೋಮಣ್ಣ ಬೆಳೆದು ನಿಂತಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಅತೀ ಹೆಚ್ಚು ಸ್ಥಾನ ,ಅತೀ ಹೆಚ್ಚು ಮಂತ್ರಿ ಸ್ಥಾನ, ನೀಡಿದ್ದು ಬಿಜೆಪಿ ಎಂದರು.
ಚುನಾವಣೆ ತಂತ್ರ:
ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಇಬ್ಬರಿದ್ದಾರೆ. ಜೆಡಿಎಸ್ ನಲ್ಲಿ ಕುಮಾರಸ್ವಾಮಿ ಹೆಸರು ಇದೆ. ನಮ್ಮ ಚುನಾವಣೆ ತಂತ್ರ ನಾವು ರೂಪಿಸುತ್ತೇವೆ. ಪಕ್ಷ ಗೆಲ್ಲಲಿದೆ ಎಂದು ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ವರಿಷ್ಠರ ತೀರ್ಮಾನ:
ಎಲ್ಲರಿಗೂ ಅವಕಾಶ ಕೊಡಲಾಗಿದೆ. ನಿನ್ನೆ ಸ್ವತಃ ಅಮಿತ್ ಶಾ ಅವರು ಶೆಟ್ಟರ್ ಜೊತೆ ಮಾತಾಡಿದ್ದಾರೆ. ರಾಜ್ಯ, ಜಿಲ್ಲಾ ಮಟ್ಟದ ಕೋರ್ ಕಮಿಟಿಯಲ್ಲಿ ಅವರ ಹೆಸರು ಇತ್ತು. ಇದು ಮೇಲಿನವರ ತೀರ್ಮಾನ ಎಂದು ತಿಳಿಸಿದ ಮುಖ್ಯಮಂತ್ರಿಗಳು ಬದಲಾವಣೆ ತರುವಂತಹ ಕಾಲ ಇದು ಎಂದರು.
ಡ್ಯಾಮೇಜ್ ಕಂಟ್ರೋಲ್:
ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಅವಕಾಶ ಕೊಡಬೇಕಾಗಿತ್ತು. ಅದೇ ಕಾರಣಕ್ಕೆ ಜಗದೀಶ್ ಶೆಟ್ಟರ್ ಟಿಕೆಟ್ ತಪ್ಪಿದೆ. ಅವರ ಎಲ್ಲಾ ಪ್ರಶ್ನೆಗೆ ನಾನು ಉತ್ತರ ನೀಡುವುದಿಲ್ಲ ಎಂದರು. ಹೊಸ ಬೆಳವಣಿಗಾಗಿ ಈ ಪ್ರಯತ್ನ ಎಂದ ಅವರು, ಶೆಟ್ಟರ್ ರಾಜಿನಾಮೆಯಿಂದ ಬಿಜೆಪಿಗೆ ಸ್ವಲ್ಪ ಹಾನಿಯಾಗಲಿದೆ .ಡ್ಯಾಮೇಜ್ ಕಂಟ್ರೋಲ್ ಗೆ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw