ಶಿಕ್ಷಣ ವ್ಯವಸ್ಥೆಗೆ ನನ್ನ ಬಲಿದಾನ ಎಂದು ವಿಡಿಯೋ ಮಾಡಿ ಯುವಕ ಆತ್ಮಹತ್ಯೆ!
ಹಾಸನ: ಶಿಕ್ಷಣ ವ್ಯವಸ್ಥೆ ಬದಲಾವಣೆಗೆ ನನ್ನ ಬಲಿದಾನ ಎಂದು ವಿಡಿಯೋ ಮಾಡಿಟ್ಟು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ನನ್ನ ಆತ್ಮಹತ್ಯೆಗೆ ಶಿಕ್ಷಣ ಕೂಡಾ ಕಾರಣವಾಗಿದೆ ಎಂದು ಯುವಕ ಹೇಳಿದ್ದಾನೆ.
ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹೇಮಂತ್ ಎಂಬ ಯುವಕ ಈ ಕೃತ್ಯ ನಡೆಸಿದ್ದಾನೆ. ಹೇಮಂತ್ ಹಾಸನ ನಗರದ ಖಾಸಗಿ ತಾಂತ್ರಿಕ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಜಿಲ್ಲೆಯ ಅರಸೀಕೆರೆ ತಾಲೂಕಿನ ಹಿರಿಯಾಳು ನಿವಾಸಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ನನ್ನ ಸಾವಿನ ನಂತರ ಅಂಗಾಂಗ ದಾನ ಮಾಡಿ. ನನ್ನ ಅಂತ್ಯಕ್ರಿಯೆಯಲ್ಲಿ ಸಿಎಂ, ಶಿಕ್ಷಣ ಸಚಿವರು, ಆದಿ ಚುಂಚನಗಿರಿ ಶ್ರೀಗಳು ಬಾಗಿ ಆಗಬೇಕು ಅಂತ ಮನವಿ ಮಾಡಿರುವ ಹೇಮಂತ್, 13 ನಿಮಿಷದ ವಿಡಿಯೋ ಮಾಡಿ ನೇಣಿಗೆ ಕೊರಳೊಡ್ಡಿದ್ದಾನೆ ಎಂದು ತಿಳಿದು ಬಂದಿದೆ.
ಈಗಿನ ಶಿಕ್ಷಣ ವ್ಯವಸ್ಥೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸೈಬರ್ ಸೆಂಟರ್ ನಲ್ಲಿ ಕೆಲಸ ಮಾಡಬಹುದು ಅಷ್ಟೇ. ಆದರೆ ನನ್ನಪ್ಪ ಶಿಕ್ಷಕರು ಅವರ ವಿದ್ಯಾರ್ಥಿಗಳು ದೊಡ್ಡ ಸಾಧನೆ ಮಾಡಿದ್ದಾರೆ. ಹಿಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಅದು ಸಾಧ್ಯವಿತ್ತು. ಆದರೆ ಈಗಿನ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಸಾದ್ಯವೇ ಇಲ್ಲ. ಸಿಎಂ, ಶಿಕ್ಷಣ ಇಲಾಖೆ, ವಿಟಿಯು ವಿಸಿ ಎಲ್ಲರೂ ಚಿಂತಿಸಿ. ಎಲ್ಲಾ ರಾಜಕೀಯ ಪಕ್ಷದ ಗಣ್ಯ ನಾಯಕರು ಶಿಕ್ಷಣ ಸುಧಾರಣೆಗೆ ಸಹಕರಿಸಿ ಅಂತ ಕೋರಿದ್ದಾನೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ಎಟಿಎಂನಲ್ಲಿ ಹೊಸ ಫೀಚರ್ ಪರಿಚಯಿಸಿದ ಎಸ್ ಬಿಐ: ಇದರ ಪ್ರಯೋಜನ ಏನು ಗೊತ್ತಾ?
ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಶೀಘ್ರವೇ 5 ಸಾವಿರ ಶಿಕ್ಷಕರ ನೇಮಕಾತಿ
ಬ್ರಾಹ್ಮಣರಿಗೆ ಉನ್ನತ ಹುದ್ದೆ, ದಲಿತ, ಬಿಲ್ಲವ, ಬಂಟರಿಗೆ ತ್ರಿಶೂಲ ವಿತರಣೆ | ಭಾಸ್ಕರ್ ಪ್ರಸಾದ್ ಕಿಡಿ
ದಲಿತ ಬಾಲಕಿಯ ಅತ್ಯಾಚಾರ: ಪೊಲೀಸರು, ವೈದ್ಯಾಧಿಕಾರಿಗಳಿಂದ ಕರ್ತವ್ಯ ಲೋಪ | ಯುವ ಕಾಂಗ್ರೆಸ್ ಮುಖಂಡ ಲುಕ್ಮಾನ್ ಬಂಟ್ವಾಳ
ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ ನೀಡಿದ ಸಚಿವ ಎಸ್.ಟಿ.ಸೋಮಶೇಖರ್
ಜಮೀರ್ ಹೆಗಲಿಗೆ ಬಂದೂಕು ಇರಿಸಿ ರಾಜಕೀಯವಾಗಿ ಅಲ್ಪಸಂಖ್ಯಾತರನ್ನು ಮುಗಿಸಲು ಯತ್ನ: ಶ್ರೀನಾಥ್ ಪೂಜಾರಿ