ಅಶ್ಲೀಲ ವಿಡಿಯೋ ಪ್ರಕರಣ: 2 ತಿಂಗಳ ಜೈಲುವಾಸದ ಬಳಿಕ ರಾಜ್ ಕುಂದ್ರಾಗೆ ಜಾಮೀನು - Mahanayaka

ಅಶ್ಲೀಲ ವಿಡಿಯೋ ಪ್ರಕರಣ: 2 ತಿಂಗಳ ಜೈಲುವಾಸದ ಬಳಿಕ ರಾಜ್ ಕುಂದ್ರಾಗೆ ಜಾಮೀನು

raj kundra
20/09/2021

ಮುಂಬೈ: ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳ ನಿರ್ಮಾಣದಲ್ಲಿ ತೊಡಗಿದ್ದಾರೆ ಎಂಬ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಯಾವುದೇ ಸಾಕ್ಷ್ಯಾಧಾರಗಳನ್ನು ಒದಗಿಸಲು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ವಿಫಲವಾದ ಬೆನ್ನಲ್ಲೇ ಅವರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.

ಕುಂದ್ರಾ ಮತ್ತು ಅವರ ಸಹವರ್ತಿ ರಯಾನ್ ಥೋರ್ಪೆರನ್ನು ಜುಲೈನಲ್ಲಿ ಬಂಧಿಸಲಾಗಿದ್ದು, ಈ ಪ್ರಕರಣದ ಸಂಬಂಧ 46 ವರ್ಷದ ಕುಂದ್ರಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ಸಲ್ಲಿಸಿದ ಪೂರಕ ಚಾರ್ಜ್ ಶೀಟ್ ನಲ್ಲಿ ಆತನ ವಿರುದ್ಧ ಒಂದೇ ಒಂದು ಸಾಕ್ಷ್ಯವೂ ಇಲ್ಲ ಎಂದು ಹೇಳಿದ್ದರು.ಈ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಲಾಗಿದೆ ಎಂದು ವರದಿಯಾಗಿದೆ.


Provided by

ಅಶ್ಲೀಲ ಚಿತ್ರಗಳ ನಿರ್ಮಾಣದಲ್ಲಿ ‘ಸಕ್ರಿಯವಾಗಿ’ ಭಾಗಿಯಾಗಿದ್ದ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಈ ಪ್ರಕರಣದಲ್ಲಿ ತನ್ನನ್ನು ಬಲಿಪಶು ಮಾಡಲಾಗಿದೆ ಎಂದು ರಾಜ್ ಕುಂದ್ರಾ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

ಮಠದಲ್ಲಿಯೇ ಸ್ವಾಮೀಜಿಯ ಮರ್ಡರ್!? | ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆ

ನಾನು ಎರಡು ಬಾರಿ ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿದ್ದೇನೆ | ನಟ ಸೋನು ಸೂದ್‌

ಪಂಜಾಬ್ ನಲ್ಲಿ ಪ್ರಥಮ ದಲಿತ ಸಿಎಂ ಆಗಿ ಚರಣಜಿತ್ ಸಿಂಗ್ ಆಯ್ಕೆ | ದೇಶದ್ಯಾದ್ಯಂತ ‘ದಲಿತ ಸಿಎಂ’ ಚರ್ಚೆ

ವಿಡಿಯೋದಲ್ಲಿರುವುದು ನಾನಲ್ಲ, ಅದೊಂದು ನಕಲಿ ವಿಡಿಯೋ: ಸದಾನಂದ ಗೌಡ ಸ್ಪಷ್ಟನೆ

ಬೈಕ್ ನಲ್ಲಿ ಜೊತೆಯಾಗಿ ಪ್ರಯಾಣಿಸಿದ ಅನ್ಯಧರ್ಮೀಯ ಯುವಕ, ಯುವತಿಯ ಮೇಲೆ ದುಷ್ಕರ್ಮಿಗಳಿಂದ ದಾಳಿ

ಇತ್ತೀಚಿನ ಸುದ್ದಿ