ಶಿಲುಬೆ ತೆರವಿಗೆ ಬಜರಂಗದಳ ಯತ್ನ: ಪೊಲೀಸರ ಜೊತೆಗೆ ಘರ್ಷಣೆ! - Mahanayaka
7:25 PM Thursday 12 - December 2024

ಶಿಲುಬೆ ತೆರವಿಗೆ ಬಜರಂಗದಳ ಯತ್ನ: ಪೊಲೀಸರ ಜೊತೆಗೆ ಘರ್ಷಣೆ!

bajarangadal
05/01/2022

ಚಿಕ್ಕಮಗಳೂರು:  ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರಗುಂದದಲ್ಲಿ  ಬಜರಂಗದಳದ ಕಾರ್ಯಕರ್ತರು ಶಿಲುಬೆ ತೆರವಿಗೆ ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಈ ಕೃತ್ಯವನ್ನು ಪೊಲೀಸರು ವಿಫಲಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶಿಲುಬೆ ಹಾಕಲಾಗಿದೆ ಎಂದು ಆರೋಪಿಸಿದ ಬಜರಂಗದಳದ ಕಾರ್ಯಕರ್ತರು ಶಿಲುಬೆ ತೆರವಿಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದ್ದು, ಈ ವೇಳೆ ಪೊಲೀಸರು ಹಾಗೂ ಬಜರಂಗದಳದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಎನ್.ಆರ್.ಪುರ ತಾಲೂಕಿನ ಉಮಾಮಹೇಶ್ವರ ದೇವಸ್ಥಾನದ ಬಳಿ ಬುಧವಾರ ಘಟನೆ ನಡೆದಿದ್ದು, ಬಜರಂಗದಳ ಕರಗುಂದ ಚಲೋಗೆ ಕರೆ ನೀಡಿತ್ತು. ಘಟನೆಯ ವೇಳೆ ಬಜರಂಗದಳದ ಪ್ರಾಂತ್ಯ ಸಂಚಾಲಕ ರಘು ಸೇರಿ, ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು ಎಂದು ವರದಿಯಾಗಿದೆ.

ಘಟನೆ ಸಂದರ್ಭದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ತಳ್ಳಾಟ-ನೂಕಾಟ ನಡೆದಿದ್ದು, ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೇಸರಿ ಶಾಲು ಧರಿಸಿ ಪ್ರತಿಭಟನೆ!

ಮಂಗಳೂರು ವಿವಿ ತನ್ನ ವರ್ಚಸ್ಸನ್ನು ಕಳೆದುಕೊಳ್ಳುತ್ತಿದೆ:  ಕ್ಯಾಂಪಸ್ ಫ್ರಂಟ್

ಸೊಸೆಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ ಮಾವ!

ತಂದೆಯ ಕತ್ತು ಸೀಳಿ ಹತ್ಯೆ ಮಾಡಿದ ಪಾಪಿ ಮಗ!

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಯಾವ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ? | ಏನೇನು ನಿರ್ಬಂಧಗಳಿವೆ?

ಇತ್ತೀಚಿನ ಸುದ್ದಿ