ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಬಲಿ!

ಶಿವಮೊಗ್ಗ: ಜಮ್ಮು–ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಗೆ ಕರ್ನಾಟಕದ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಬಲಿಯಾಗಿದ್ದಾರೆ.
ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತಪಟ್ಟವರಾಗಿದ್ದಾರೆ. ಇವರ ಪತ್ನಿ ಪಲ್ಲವಿ ಹಾಗೂ ಪುತ್ರ ಸುರಕ್ಷಿತರಾಗಿದ್ದಾರೆ.
ಏಪ್ರಿಲ್ 19ರಂದು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದು, ಪತ್ನಿಯ ಕಣ್ಣೆದುರೇ ಪತಿಯನ್ನು ಕೊಂದು ಮಗನಿಗೆ ಬೈದು ಹಲ್ಲೆ ಮಾಡಿದ್ದಾರೆ. ನನ್ನನ್ನು ಮತ್ತು ನನ್ನ ಮಗನನ್ನೂ ಕೊಂದು ಬಿಡು ಎಂದು ಹೇಳಿದ್ವಿ, ನಿನ್ನ ಕೊಲ್ಲಲು ಮೋದಿಗೆ ಹೇಳು ಎಂದು ಹೇಳಿದರು ಎಂದು ಮಹಿಳೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಮಂಜುನಾಥ್ ಪತ್ನಿ ಪಲ್ಲವಿಯವರು ಮಲ್ನಾಡ್ ಅಡಕೆ ಮಾರ್ಕೆಟಿಂಗ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ನ ಬೀರೂರು ಬ್ರ್ಯಾಂಚ್ನಲ್ಲಿ ಮ್ಯಾನೇಜರ್ ಆಗಿದ್ದಾರೆ.
ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಐದಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ, ಇದುವರೆಗೆ ಕೇವಲ ಇಬ್ಬರ ಸಾವಿನ ಬಗ್ಗೆ ಖಚಿತ ಮಾಹಿತಿ ದೊರೆತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD