ಅಂಗನವಾಡಿ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರ ಆರಂಭ ವಿರೋಧಿಸಿ ಪ್ರತಿಭಟನೆ - Mahanayaka
3:30 AM Thursday 21 - November 2024

ಅಂಗನವಾಡಿ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರ ಆರಂಭ ವಿರೋಧಿಸಿ ಪ್ರತಿಭಟನೆ

anganawadi
03/02/2022

ಬೆಂಗಳೂರು: ಬೆಂಗಳೂರಿನ 100 ಅಂಗನವಾಡಿ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರವನ್ನು ಆರಂಭಿಸುವ ಸರ್ಕಾರದ ನಿರ್ಧಾರ ವಿರೋಧಿಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಎಐಟಿಯುಸಿ ಅಂಗನವಾಡಿ ಫೆಡರೇಷನ್‌ ನೇತೃತ್ವದಲ್ಲಿ ಮೌರ್ಯ ಸರ್ಕಲ್‌ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಎಐಟಿಯುಸಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪ್ರಧಾನ ಕಾರ್ಯದರ್ಶಿ ಜಯಮ್ಮ ನೇತೃತ್ವದಲ್ಲಿ ಮುಷ್ಕರ ನಡೆಯುತ್ತಿದ್ದು, ಉದ್ಯೋಗಸ್ಥ ಮಹಿಳೆಯರ ಮಕ್ಕಳನ್ನು ನೋಡಿಕೊಳ್ಳುವ ನಿರ್ಧಾರ ಸ್ವಾಗತಿಸುತ್ತೇವೆ. ಆದರೆ ಶಿಶುಪಾಲನಾ ಕೇಂದ್ರಗಳನ್ನು ಪ್ರತ್ಯೇಕವಾಗಿ ತೆರೆದು, ಶಿಕ್ಷಕರು, ಆಯಾಗಳನ್ನು ಪ್ರತ್ಯೇಕವಾಗಿ ನೇಮಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಆಗ್ರಹಿಸಿದ್ದಾರೆ.

ಈಗಿರುವ ಅಂಗನವಾಡಿ ಕೇಂದ್ರಗಳಲ್ಲೇ ಶಿಶುಪಾಲನಾ ಕೇಂದ್ರ ಆರಂಭಿಸಲು ಜಾಗ ಸಾಲುವುದಿಲ್ಲ. ಈ ಬಗ್ಗೆ ಸಚಿವರ ಗಮನಕ್ಕೆ ತಂದರೂ ನಮ್ಮನ್ನು ಕರೆದು ಚರ್ಚಿಸಿಲ್ಲ. ಅಂಗನವಾಡಿ ಕೇಂದ್ರಗಳು ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಕಾರ್ಯ ನಿರ್ವಹಿಸುತ್ತಿವೆ.

ಅಂಗನವಾಡಿ ಕೇಂದ್ರಗಳಲ್ಲೇ ಶಿಶುಕೇಂದ್ರಗಳನ್ನೂ ಆರಂಭಿಸಿದರೆ ಅಂಗನವಾಗಿ ಕಾರ್ಯಕರ್ತರು ಹಾಗೂ ಸಹಾಯಕರು ಇನ್ನು ಮುಂದೆ ಬೆಳಗ್ಗೆ 7:30 ರಿಂದ ರಾತ್ರಿ 7ರ ವರೆಗೆ ಕೆಲಸ ಮಾಡಬೇಕಾಗುತ್ತದೆ. ಅಂಗನವಾಡಿ ಕಾರ್ಯಕರ್ತರಿಗೆ 10 ಸಾವಿರ, ಸಹಾಯಕರಿಗೆ 5,250 ರೂ. ಗೌರವ ಧನ ನೀಡಲಾಗುತ್ತಿದೆ. ಇಷ್ಟು ಕಡಿಮೆ ಗೌರವ ಧನದಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.




ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಿಂತಿದ್ದ ಟ್ಯಾಂಕರ್‌ ಗೆ​ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಸಾವಿನಲ್ಲೂ ಹಲವರಿಗೆ ಜೀವ ಕೊಟ್ಟ 14 ವರ್ಷದ ಬಾಲಕ

ಮಾಟ-ಮಂತ್ರದ ಭಯ ಹುಟ್ಟಿಸಿ ಲಕ್ಷಾಂತರ ರೂ. ದೋಚಿರುವ ಮಂತ್ರವಾದಿಯ ಬಂಧನ

ಸಿನಿಮೀಯ ಶೈಲಿಯಲ್ಲಿ ಇಂಜಿನಿಯರ್ ಅಪಹರಣ ಪ್ರಕರಣ: ಮೂರು ಗಂಟೆಯಲ್ಲೇ 6 ಮಂದಿಯ ಬಂಧನ

 

ಇತ್ತೀಚಿನ ಸುದ್ದಿ