ಸರ್ಕಾರ ರಚನೆಯಾದ ಬೆನ್ನಲ್ಲೇ ಎನ್‌ಡಿಎ ಕೂಟದಲ್ಲಿ ಅಸಮಾಧಾನ: ಶಿವಸೇನೆ, ಎನ್‌ಸಿಪಿ ಮುನಿಸು
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ರಚನೆಯಾದ 24 ಗಂಟೆಗಳ ಬಳಿಕ ಎನ್‌ಡಿಎ ಕೂಟದಲ್ಲಿ ಅಸಮಾಧಾನ ಕಂಡುಬಂದಿದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸಚಿವ ಸಂಪುಟ ಸ್ಥಾನ ಸಿಗದಿರುವ ಬಗ್ಗೆ ಶಿವಸೇನೆ ಸಂಸದರೊಬ್ಬರು ನಿರಾಶೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಇತರ ಎನ್‌ಡಿಎ ಘಟಕಗಳ ಬಗ್ಗೆ ‘ಪಕ್ಷಪಾತ’ ಮಾಡಿದೆ ಎಂದು ಆರೋಪಿಸಿದ್ದಾರೆ.
ಎನ್‌ಡಿಎ ಸರ್ಕಾರದಲ್ಲಿನ ರಾಜ್ಯ ಸಚಿವ ಸ್ಥಾನ ಪಡೆಯುವ ಬಿಜೆಪಿಯ ಪ್ರಸ್ತಾಪವನ್ನು ಶಿವಸೇನೆ ನಿರಾಕರಿಸಿತ್ತು. ಇದಾದ, ಒಂದು ದಿನದ ನಂತರ ಮಾವಲ್‌ನ ಶಿವಸೇನೆ ಸಂಸದ ಶ್ರೀರಂಗ್ ಬಾರ್ನೆ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದಾಗ್ಯೂ, ಶಿವಸೇನೆ ಎನ್‌ಡಿಎ ಸರ್ಕಾರಕ್ಕೆ ತಮ್ಮ ಬೇಷರತ್ ಬೆಂಬಲವನ್ನು ಸೂಚಿಸುವುದಾಗಿ ಹೇಳಿದೆ.
“ಶಿವಸೇನೆಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು. ಒಬ್ಬ ಸಂಸದರನ್ನು ಹೊಂದಿರುವ ಪಕ್ಷಕ್ಕೆ ಸ್ಥಾನ ನೀಡಲಾಗಿದೆ. ಆದರೆ, ನಾವು ಅಧಿಕ ಕ್ಷೇತ್ರದಲ್ಲಿ ಗೆಲುವು ಕಂಡರೂ ನಮಗೆ ಸಚಿವ ಸ್ಥಾನ ನೀಡಿಲ್ಲ” ಎಂದಿದ್ದಾರೆ.
15 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಶಿವಸೇನೆ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಐದು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಎನ್‌ಸಿಪಿ ಒಂದರಲ್ಲಿ ಮಾತ್ರ ಗೆಲುವು ಸಾಧಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth