ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಣೆ: ಶಿವಸೇನೆಯ ಪಾಲ್ಘರ್ ಶಾಸಕ ನಾಪತ್ತೆ!
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವು ಟಿಕೆಟ್ ನಿರಾಕರಿಸಿದ ನಂತರ ಅಸಮಾಧಾನಗೊಂಡಿದ್ದ ಪಾಲ್ಘರ್ ನ ಶಿವಸೇನೆಯ ಹಾಲಿ ಶಾಸಕ ಶ್ರೀನಿವಾಸ್ ವಂಗಾ ಅವರು ನಾಪತ್ತೆಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ಇನ್ನು ಈ ಕುರಿತು ವಂಗಾ ಅವರ ಕುಟುಂಬವು ಇಲ್ಲಿಯವರೆಗೆ ಯಾವುದೇ ಪೊಲೀಸ್ ದೂರು ದಾಖಲಿಸಿಲ್ಲ. ಬುಧವಾರ, ಪಾಲ್ಘರ್ ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಂಗಾ ಎಲ್ಲಿದ್ದಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು. ಸೋಮವಾರ ಸಂಜೆಯಿಂದ ಶಾಸಕರು ಸಂಪರ್ಕದಲ್ಲಿಲ್ಲ.
ಕುಟುಂಬ ಸದಸ್ಯರು ಅವರನ್ನು ಹುಡುಕಿದ್ದಾರೆ. ಆದರೆ ಕುಟುಂಬದವ್ರು ಅವ್ರ ಮಾನಸಿಕ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.
ಶಿವಸೇನೆ ಟಿಕೆಟ್ ನಿರಾಕರಿಸಿದ ನಂತರ ವಂಗಾ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪರವಾಗಿ ನಿಂತು ಅವ್ರ ಪಕ್ಷಕ್ಕೆ ಸೇರುವ ಮೂಲಕ ಅವರು ಗಂಭೀರ ತಪ್ಪು ಮಾಡಿದ್ದೇನೆ ಎಂದು ಹೇಳಿದ್ದರು. ವಂಗಾ ಅವರ ಭಾವನಾತ್ಮಕ ಪ್ರತಿಕ್ರಿಯೆಗಳ ವೀಡಿಯೊಗಳು ಅಂದಿನಿಂದ ಸಾಮಾಜಿಕ ಮಾಧ್ಯಮ ಮತ್ತು ಸುದ್ದಿ ಚಾನೆಲ್ ಗಳಲ್ಲಿ ವೈರಲ್ ಆಗಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj