ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ: ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸರು ಸಾವು
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಪೂತಲಪಟ್ಟು ತಾಲೂಕಿನ ಪಿ. ಕೊತ್ತಕೋಟ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಪ್ರಕರಣವೊಂದರ ತನಿಖೆಗಾಗಿ ತಿರುಪತಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ರೋಲವಾಡಿ ಗ್ರಾಮದ ಪಿ.ಎಸ್.ಐ. ಅವಿನಾಶ್ (29), ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಚಿಕ್ಕಳಕೆರೆ ಗ್ರಾಮದ ಕಾನ್ ಸ್ಟೇಬಲ್ ಅನಿಲ್ ಮುಲಿಕ್ (26) ಹಾಗೂ ಚಾಲಕ ಜೋಸೆಫ್ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka