ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು ‘ಕನ್ನಡಿಗರ ವಿಕೃತ ಮನಸ್ಥಿತಿ’: ಉದ್ದವ್ ಠಾಕ್ರೆ - Mahanayaka

ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು ‘ಕನ್ನಡಿಗರ ವಿಕೃತ ಮನಸ್ಥಿತಿ’: ಉದ್ದವ್ ಠಾಕ್ರೆ

uddhav thackeray
19/12/2021

ಮುಂಬೈ: ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು ‘ಕನ್ನಡಿಗರ ವಿಕೃತ ಮನಸ್ಥಿತಿ’ ಎಂದು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಕಿಡಿಕಾರಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸ ಬೇಕು ಎಂದು ಒತ್ತಾಯಿಸಿದ್ದಾರೆ.

ಈ ಘಟನೆಯನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಹಲವು ವರ್ಷಗಳಿಂದ ಕರ್ನಾಟಕದಲ್ಲಿ ಮರಾಠಿಗರು ದೌರ್ಜನ್ಯ ಎದುರಿಸುತ್ತಿದ್ದಾರೆ. ಈಗ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ರಾಜಧಾನಿ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ರಸ್ತೆಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿಯಲಾಗಿತ್ತು. ಈ ಸಂಬಂಧ ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ಉದ್ದವ್ ಠಾಕ್ರೆ ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

‘ವೀರ ಸಾವರ್ಕರ್’  ಪುಸ್ತಕ ಬಿಡುಗಡೆ: ಅಂಬೇಡ್ಕರ್ ಹಾಗೂ ಸಾವರ್ಕರ್ ನಡುವೆ ಉತ್ತಮ ಸಂಬಂಧವಿತ್ತು | ಬಿ.ಎಲ್.ಸಂತೋಷ್

ಕೊಲೆಗೆ ಕೊಲೆಯೇ ಉತ್ತರವಾಯ್ತು!: ಎಸ್ ಡಿಪಿಐ ಮುಖಂಡನ ಕೊಲೆ ನಡೆದು ಬೆಳಗಾಗುವಷ್ಟರಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಆಟೋ ಮೇಲೆ ಮಗುಚಿ ಬಿದ್ದ ಬೃಹತ್ ಕಂಟೈನರ್: ನಾಲ್ವರ ದಾರುಣ ಸಾವು

ರಾತ್ರಿ ವೇಳೆ ಹೊತ್ತಿ ಉರಿದ ಎರಡು ಅಂಗಡಿಗಳು: ಮಂಗಳೂರಿನ ದುಬೈ ಮಾರ್ಕೆಟ್ ನಲ್ಲಿ ಘಟನೆ

ಇತ್ತೀಚಿನ ಸುದ್ದಿ