ಶಿವಮೊಗ್ಗ ಏರ್ ಪೋರ್ಟ್ ಗೆ ಯಡಿಯೂರಪ್ಪ ಹೆಸರು ಇಡಲು ನಿರ್ಧಾರ: ಸಿಎಂ ಬೊಮ್ಮಾಯಿ - Mahanayaka
10:00 AM Monday 16 - December 2024

ಶಿವಮೊಗ್ಗ ಏರ್ ಪೋರ್ಟ್ ಗೆ ಯಡಿಯೂರಪ್ಪ ಹೆಸರು ಇಡಲು ನಿರ್ಧಾರ: ಸಿಎಂ ಬೊಮ್ಮಾಯಿ

shivamogga airport
21/04/2022

ಶಿವಮೊಗ್ಗ: ಸೋಗಾನೆ ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ(B. S. Yediyurappa) ಅವರ ಹೆಸರು ಇಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಹೇಳಿಕೆ ನೀಡಿದ್ದಾರೆ.

ವಿಮಾನ ನಿಲ್ದಾಣ(Shivamogga Airport) ಕಾಮಗಾರಿ ವೀಕ್ಷಣೆ ಬಳಿಕ ಮಾತನಾಡಿದ ಸಿಎಂ, ರಾಜ್ಯದ ಆರ್ಥಿಕ ಅಭಿವೃದ್ಧಿ ಆಗಬೇಕಾದರೆ ಮೂಲಭೂತ ಸೌಲಭ್ಯಗಳು ಮುಖ್ಯ. ಇದರಿಂದ ರಾಜ್ಯದಲ್ಲಿ ಆರ್ಥಿಕವಾಗಿಯು ಬೆಳವಣಿಗೆ ಆಗುತ್ತದೆ. 3500 ಕಿ.ಮೀ. ನಷ್ಟು ರಾಜ್ಯ ಹೆದ್ದಾರಿಗೆ ಅನುಮೋದನೆ ನೀಡಿದ್ದು, ಕೇಂದ್ರ ಸರಕಾರ 6 ಸಾವಿರ ಎನ್. ಎಚ್. ಅಭಿವೃದ್ಧಿಗೆ ಅನುಮೋದನೆ ಕೊಟ್ಟಿದೆ. ಕೈಗಾರಿಕೆ, ಶಿಕ್ಷಣ, ಆರೋಗ್ಯ ಎಲ್ಲಾ ಬೆಳೆಯಬೇಕು ಅಂದರೆ ಏರ್ ಪೋರ್ಟ್ ಅಗತ್ಯ. ಶಿವಮೊಗ್ಗ, ಬಿಜಾಪುರದಲ್ಲಿ ಏರ್ ಪೋರ್ಟ್ ಕೆಲಸ ನಡೆಯುತ್ತಿದೆ. ರಾಯಚೂರಿನಲ್ಲಿ ಈ ವರ್ಷದಿಂದ ಕಾಮಗಾರಿ ಪ್ರಾರಂಭವಾಗುತ್ತದೆ. ಕಾರವಾರದಲ್ಲಿಯು ನೇವಿ ಏರ್ ಪೋರ್ಟ್ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

2006ರಲ್ಲಿಯೇ ಶಿವಮೊಗ್ಗ ಏರ್ ಪೋರ್ಟ್ ಕಾಮಗಾರಿ  ಆರಂಭವಾಗಿದ್ದರು ಕೂಡ  ಕಾಮಗಾರಿ ವಿಳಂಬವಾಯ್ತು. ಬೆಂಗಳೂರಿನ ನಂತರ ಅತಿಹೆಚ್ಚು ಉದ್ದದ ರನ್ ವೇ ಹೊಂದಿರುವ ಏರ್ ಪೋರ್ಟ್ ಶಿವಮೊಗ್ಗ ಏರ್ ಪೋರ್ಟ್. ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣದ ಸೌಲಭ್ಯ ಹೊಂದಲಿದೆ.

ರೈತರ ಜಮೀನಿಗೆ ಪರಿಹಾರ ಕೊಡಬೇಕಿದೆ. ನೈಟ್ ಲ್ಯಾಂಡಿಂಗ್ ಸೌಲಭ್ಯ ಒದಗಿಸಬೇಕಿದೆ. ಕಾಮಗಾರಿಗೆ ಹೆಚ್ಚುವರಿ‌ 50 ಕೋಟಿ ಹಣ ಬೇಕಿದೆ. ಹೆಚ್ಚುವರಿ ಹಣ ಬಿಡುಗಡೆಗೆ ರಾಜ್ಯ ಸರಕಾರ ಅನುಮೋದನೆ ನೀಡಲಿದೆ. ಈ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ವಿಮಾನ ನಿಲ್ದಾಣ ಅಂತಾ ಹೆಸರಿಡಲು ಕ್ಯಾಬಿನೆಟ್ ನಿರ್ಧಾರ ಮಾಡಿದೆ. ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇವೆ ಎಂದರು.

ಯಡಿಯೂರಪ್ಪ ಅವರು ಏರ್ ಪೋರ್ಟ್ ಕಾಮಗಾರಿ ವೀಕ್ಷಣೆ ಮಾಡುವಂತೆ ಸೂಚಿಸಿದ್ದರು. ಅದರಂತೆ ಇಂದು ಕಾಮಗಾರಿ ವೀಕ್ಷಣೆ ಮಾಡಿದ್ದೇನೆ. ಇದು ಕರ್ನಾಟಕದ ಹೆಮ್ಮೆಯ ಏರ್ ಪೋರ್ಟ್ ಆಗಲಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕ ಜಿಗ್ನೇಶ್ ಮೇವಾನಿ ಅರೆಸ್ಟ್!

ಪಾನ್ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದಕ್ಕೆ ಕ್ಷಮೆಯಾಚಿಸಿದ ನಟ ಅಕ್ಷಯ್ ಕುಮಾರ್ | ಈ ಬಾರಿಯಾದರೂ ಮಾತು ಉಳಿಸಿಕೊಳ್ಳುತ್ತಾರಾ?

ಆಟವಾಡುತ್ತಿದ್ದ ಬಾಲಕನಿಗೆ ಟಿಪ್ಪರ್ ಡಿಕ್ಕಿ: ಬಾಲಕನ ದಾರುಣ ಸಾವು

ಪ್ರಾಧ್ಯಾಪಕಿಯ ಬಗ್ಗೆ ಮಾನಹಾನಿಕರ ಪೋಸ್ಟರ್ ಅಂಟಿಸಿ ಕಿರುಕುಳ: ಇಬ್ಬರು ಪ್ರಾಧ್ಯಾಪಕರ ಬಂಧನ

ಸರ್ಕಾರದ ಮೇಲೆ ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದು | ನಿರಂಜನಾನಂದಪುರಿ ಸ್ವಾಮೀಜಿ

ಇತ್ತೀಚಿನ ಸುದ್ದಿ