ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಬಿಎಸ್ ವೈ ಹೇಳಿದ್ದೇನು?
ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೊದಲೇ ವಿಮಾನ ನಿಲ್ದಾಣಕ್ಕೆ ಯಾರ ಹೆಸರಿಡಬೇಕು ಎಂಬ ಚರ್ಚೆ ಆರಂಭವಾಗಿತ್ತು. ಮಾಜಿ ಸಿಎಂ ಯಡಿಯೂರಪ್ಪನವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲು ಸರ್ಕಾರ ಕೂಡ ಚಿಂತನೆ ನಡೆಸಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಎಸ್.ಡಿಯೂರಪ್ಪ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಸಿಎಂ ಬೊಮ್ಮಾಯಿಯನ್ನುದ್ದೇಶಿಸಿ ಪತ್ರ ಬರೆದಿರುವ ಬಿಎಸ್ ವೈ, ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚಿಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದ ಎಂದಿದ್ದಾರೆ.
ವಿಮಾನ ನಿಲ್ದಾಣಕ್ಕೆ ತನ್ನ ಹೆಸರಿಡಲು ಸರ್ಕಾರ ನಿರ್ಧರಿಸಿರುವುದರ ಬಗ್ಗೆ ಸಲಹೆ ನೀಡಿರುವ ಅವರು, ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು, ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾ ನನ್ನದೊಂದು ಅಳಿಲು ಸೇವೆ ಮಾತ್ರವಾಗಿದೆ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾ ಭಾವ ನನ್ನದು. ಈ ಹಿನ್ನಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಈ ಎಲ್ಲಾ ಕಾರಣದಿಂದ ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಅವರು ಪತ್ರದ ಮೂಲಕ ಸಲಹೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶ್ರೀರಾಮಸೇನೆ, ಭಜರಂಗದಳ, ಆರೆಸ್ಸೆಸ್ , ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡೆಯಬೇಕು: ಸಿದ್ದರಾಮಯ್ಯ ಕಿಡಿ
ಮನೆಯೊಳಗೆ ಸ್ಫೋಟಗೊಂಡ ಎಲೆಕ್ಟ್ರಿಕ್ ಬೈ ಕ್ ನ ಬ್ಯಾಟರಿ: ಓರ್ವ ಸಾವು, ಮಹಿಳೆಯ ಸ್ಥಿತಿ ಗಂಭೀರ
ಪರೀಕ್ಷೆಗೆ ಓದುತ್ತಿದ್ದ ವೇಳೆ ಟೆರೆಸ್ ನಿಂದ ಬಿದ್ದು ವಿದ್ಯಾರ್ಥಿ ಸಾವು