ಶಿವರಾಜ್ ಕುಮಾರ್, ಸಿ.ಟಿ.ರವಿ ಸಹಿತ ನಾಲ್ವರ ಹತ್ಯೆಗೆ ಸಂಚು!?

bt lalitha nayak
22/03/2021

ಬೆಂಗಳೂರು: ತನ್ನನ್ನು ಸೇರಿದಂತೆ ನಾಲ್ವರು ಪ್ರಮುಖರನ್ನು ಹತ್ಯೆ ಮಾಡುವ ಬೆದರಿಕೆ ಪತ್ರ ಬಂದಿದೆ ಎಂದು ಹಿರಿಯ ಸಾಹಿತಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದ್ದಾರೆ.

ರವಿವಾರ  ನಗರದ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನ ಪೂರ್ಣಿಮಾ ಪ್ಯಾಲೇಸ್ ನ ದೇವಂಹಾಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,  ತನ್ನನ್ನು ಸೇರಿದಂತೆ ನಾಲ್ವರನ್ನು ಹತ್ಯೆ ಮಾಡುತ್ತೇವೆ ಎಂದು ತನಗೆ ಬೆದರಿಕೆ ಪತ್ರವೊಂದು ಬಂದಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್, ಖಾಸಗಿ ಚಾನೆಲ್ ನ ರಂಗನಾಥ್ ಹಾಗೂ ತನ್ನನ್ನು ಹತ್ಯೆ ಮಾಡುವ ಬಗ್ಗೆ ಬೆದರಿಕೆ ಪತ್ರ ಬಂದಿದೆ ಎಂದು ಅವರು ಹೇಳಿದ್ದಾರೆ.

ಮೇ 1ರಂದು ಹತ್ಯೆ ಮಾಡುತ್ತೇವೆ ಎಂದು ಪತ್ರದಲ್ಲಿ ಬೆದರಿಕೆ ಹಾಕಲಾಗಿದ್ದು,  ಈ ಪತ್ರವನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬಿ.ಟಿ.ಲಲಿತಾ ನಾಯಕ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version