ತಿರುಪತಿ ತಿಮ್ಮಪ್ಪನಿಗೆ ಮುಡಿ ನೀಡಿದ ಶಿವರಾಜ್ ಕುಮಾರ್, ಗೀತಾ
07/12/2024
ನಟ ಶಿವರಾಜ್ ಕುಮಾರ್ ಹಾಗೂ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದು, ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಇದೇ ವೇಳೆ ತಿಮ್ಮಪ್ಪನಿಗೆ ಮುಡಿ ಅರ್ಪಿಸಿದ್ದಾರೆ.
ಇತ್ತೀಚೆಗೆ ಶಿವರಾಜ್ ಕುಮಾರ್ ಅವರ ಭೈರತಿ ರಣಗಲ್ ಸಿನಿಮಾ ಹಿಟ್ ಆಗಿತ್ತು. ಸಿನಿಮಾದ ಸಕ್ಸಸ್ ನ ಖುಷಿಯ ನಡುವೆಯೇ ಅವರಿಗೆ ಅನಾರೋಗ್ಯದ ಸಮಸ್ಯೆ ಕೂಡ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಮುಡಿಕೊಟ್ಟಿದ್ದಾರೆ ಎನ್ನಲಾಗಿದೆ.
ಶಿವಣ್ಣ ಜೊತೆಗೆ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಹಾಗೂ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತ ಕೂಡ ತಿಮ್ಮಪ್ಪನ ದರ್ಶನ್ ಪಡೆದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: