ಹೆಸರು ಬದಲಾವಣೆ ಸುದ್ದಿಗೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ
ಕೇಂದ್ರ ಸಚಿವೆ ಶೋಭಾ ಕಂದ್ಲಾಜೆ ಅವರು ಮುಂದಿನ ಚುನಾವಣೆ ವೇಳೆಗೆ ಹೊಸ ಹೆಸರಿನಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.
ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡುತ್ತಿದ್ದಾರೆ. ಇದು ಯಾರೋ ಹಬ್ಬಿಸಿದ ಸುಳ್ಳು ಸುದ್ದಿ ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದು, ರಾಜಕಾರಣಿಗಳನ್ನು ಕೆಲವರು ಜೋಕರ್ ಅಂದುಕೊಂಡಿದ್ದಾರೆ. ಮಾಧ್ಯಮ, ಸಾಮಾಜಿಕ, ರಾಜಕೀಯ ವಲಯ ಅಥವಾ ವಿರೋಧ ಪಕ್ಷ ಅಪಪ್ರಚಾರ ನಿಲ್ಲಿಸಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಯಾಕೆ ಈ ಚರ್ಚೆ ಶುರುವಾಯಿತು ಗೊತ್ತಿಲ್ಲ, ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ? ಎಂದು ಅವರು ಇದೇ ವೇಳೆ ತಮ್ಮ ವಿರುದ್ಧದ ವದಂತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka