ಶೋಭಾ ಕರಂದ್ಲಾಜೆ ನಿಸ್ಸಂದೇಹವಾಗಿ ರೈತರ ಸಂಕಟಗಳಿಗೆ ಸ್ಪಂದಿಸಲಿದ್ದಾರೆ | ಯಡಿಯೂರಪ್ಪ ವಿಶ್ವಾಸ
10/07/2021
ಕಲಬುರ್ಗಿ: ಪ್ರಧಾನಿ ಮೋದಿ ಸಂಪುಟದಲ್ಲಿ ನೂತನ ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ನಿಸ್ಸಂದೇಹವಾಗಿ ರೈತರ ಸಂಕಟಗಳಿಗೆ ಸ್ಪಂದಿಸಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಲಾಗುತ್ತಿರುವ ಕಣ್ಣಿ ಮಾರ್ಕೆಟ್ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಶೋಭಾ ಅವರು ಜನನಾಯಕಿಯಾಗಿದ್ದು, ಅವರು ಹೋದಲ್ಲೆಲ್ಲ, ಅವರ ಮಾತು ಕೇಳಲು ಜನರು ಸಾಕಷ್ಟು ಸಂಖ್ಯೆಯಲ್ಲಿ ಸೇರುತ್ತಿದ್ದರು. ಈಗ ಸಚಿವೆಯೂ ಆಗಿರುವುದರಿಂದ ರಾಜ್ಯಾದ್ಯಂತ ಸಂಚರಿಸಿ ರೈತರ ಸಮಸ್ಯೆ ಸಮಸ್ಯೆಗಳನ್ನು ಆಲಿಸಲಿದ್ದಾರೆ ಎಂದು ಹೇಳಿದರು.
ಪ್ರಧಾನಿ ಮೋದಿ ಅವರು ರೈತರ ಆದಾಯವನ್ನು ದ್ವಿಗುಣಗೊಳಿಸುವ ಸಂಕಲ್ಪ ಮಾಡಿದ್ದಾರೆ. ಅದಕ್ಕೆ ಪೂರಕವಾಗಿ ದೇಶದಾದ್ಯಂತ ಅತೀ ಕಡಿಮೆ ಅವಧಿಯಲ್ಲಿ ಸಂಚರಿಸುವ ಕಿಸಾನ್ ಎಕ್ ಪ್ರೆಸ್ ರೈಲನ್ನು ಆರಂಭಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.