ರೈತ ಹೋರಾಟಗಾರರ ಬಗ್ಗೆ ಹಗುರವಾಗಿ ನಾಲಿಗೆ ಹರಿಬಿಟ್ಟ ಶೋಭಾ ಕರಂದ್ಲಾಜೆ ಜಿಲ್ಲೆಗೆ ಕಳಂಕ: ಕ್ಯಾಂಪಸ್ ಫ್ರಂಟ್
ಉಡುಪಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೇಶಾದ್ಯಂತ ವಿವಿಧ ಕಡೆಗಳಲ್ಲಿ ಕಳೆದ ಹಲವಾರು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ಬಗೆಹರಿಸುವ, ಪರಿಹಾರ ಕೊಡುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗದೇ ಪ್ರತಿಭಟನಾ ನಿರತ ರೈತರನ್ನು ಕೇಂದ್ರ ಕೃಷಿ ಸಚಿವೆ ಆಗಿರುವ ಶೋಭ ಕರಂದ್ಲಾಜೆ ರವರು ದಲ್ಲಾಳಿಗಳು ಎಂದು ಅಪಮಾನಿಸಿದ್ದು ಸಹಿಸಲಾಗದು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಹೇಳಿದೆ.
ಸಚಿವೆ ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲೆಯ ಪ್ರತಿನಿಧಿಯಾಗಿ ಲೋಕಸಭೆಗೆ ಆಯ್ಕೆಯಾಗಿ, ಉನ್ನತ ಸ್ಥಾನದಲ್ಲಿದ್ದುಕೊಂಡು ಅನ್ನದಾತರ ಬಗ್ಗೆ ಇಂತಹ ಕೀಳು ಮಟ್ಟದ ಹೇಳಿಕೆ ನೀಡಿ ನಮ್ಮ ಜಿಲ್ಲೆಗೆ ಕಳಂಕ ತಂದಿದ್ದಾರೆ, ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದೆ.
ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ರೈತರ ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿದ್ದರೆ, ಅದರ ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ ಆಗ್ರಹಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಯಾವ ದೇಶದಲ್ಲಿ ಆಶ್ರಯ ಪಡೆದಿದ್ದು ಗೊತ್ತಾ? | ಕೊನೆಗೂ ಬಯಲಾಯ್ತು ರಹಸ್ಯ
ತಾಲಿಬಾನಿಗಳಿಗೂ ಬಿಜೆಪಿಗೂ ವ್ಯತ್ಯಾಸವೇನಿಲ್ಲ ಎಂದ ಕಾಂಗ್ರೆಸ್
ಡೆತ್ ನೋಟ್ ಬರೆದಿಟ್ಟು ಇಡೀ ಕುಟುಂಬವೇ ನಾಪತ್ತೆ! | ಆತಂಕದಲ್ಲಿ ಸಂಬಂಧಿಕರು
ಗಾಳಿಯಲ್ಲಿ ಗುಂಡು ಹಾರಿಸಿ ಆತಂಕ ಸೃಷ್ಟಿಸಿದ ಬಿಜೆಪಿ ಕಾರ್ಯಕರ್ತರು!
ತನ್ನ ಬಗ್ಗೆ ತಾನೇ ಪುಸ್ತಕ ಬರೆದುಕೊಂಡು ಸ್ವಾತಂತ್ರ್ಯ ಹೋರಾಟಗಾರನಾದ ಸಾರ್ವರ್ಕರ್ | ಶಾಫಿ ಬೆಳ್ಳಾರೆ
ಸಾರ್ವರ್ಕರ್ ಗಲಾಟೆ: ಎಸ್ ಡಿಪಿಐ ಮತ್ತು ಬಿಜೆಪಿಯ ಒಳ ಒಪ್ಪಂದದ ಕಾರ್ಯಕ್ರಮ | ಹಿಂದೂ ಮಹಾಸಭಾ ಆಕ್ರೋಶ