ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡಗೆ ಸ್ವ-ಹೋಬಳಿಯಲ್ಲೇ ಶಾಕ್: 300ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
ಚಿಕ್ಕಮಗಳೂರು: ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡಗೆ ಸ್ವ-ಹೋಬಳಿಯಲ್ಲೇ ಶಾಕ್ ನೀಡಿದ್ದು, 300ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಗ್ರಾಮದ ಕಾರ್ಯಕರ್ತರು ಶಾಸಕ ರಾಜೇಗೌಡ ವಿರುದ್ಧ ಬೇಸತ್ತು ಬಿಜೆಪಿ ಸೇರ್ಪಡೆಯಾಗಿರೋದಾಗಿ ಹೇಳಿದ್ದಾರೆ.
ಮಾಜಿ ಗ್ರಾ.ಪಂ ಅಧ್ಯಕ್ಷೆ ಕಮಲ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಗ್ರಾಮದ ಬೂತ್ ಮಟ್ಟದ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರೇ ಶಾಮಿಯಾನ ಹಾಕಿ, ಕಾರ್ಯಕ್ರಮ ಮಾಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡರ ಮೇಲೆ ಜನ ವಿಶ್ವಾಸ ಕಳೆದುಕೊಂಡು ಬಹಳ ದಿನಗಳಾಗಿವೆ. ಅವರಿಗೆ ಗೊತ್ತಿರೋದು ಎರಡೇ ವಿಷಯ. ಹಣ ಬಂದರೆ ನಾನು ತಂದೆ ಅನ್ನೋದು. ಬರದಿದ್ದರೆ ಜೀವರಾಜ್ ಬಿಟ್ಟಿಲ್ಲ ಅನ್ನೋದು ಎಂದು ಮಾಜಿ ಸಚಿವ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಇದೇ ವೇಳೆ ವ್ಯಂಗ್ಯವಾಡಿದ್ದಾರೆ.
ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮಹಲ್ಗೋಡು ಗ್ರಾಮದಲ್ಲಿ ಇಂದು 200ಕ್ಕೂ ಹೆಚ್ಚು ಜನ ಬಿಜೆಪಿ ಸೇರಿದ್ದಾರೆ. ಅವರೇ ಶಾಮಿಯಾನ ಹಾಕಿ ಅವರೇ ಘೋಷಣೆ ಕೂಗಿ, ಮೋದಿ, ಬೊಮ್ಮಾಯಿ ಹಾಗೂ ಬಿ.ಎಸ್.ವೈ ನಾಯಕತ್ವ ಮೆಚ್ಚಿ ಬಿಜೆಪಿ ಸೇರಿದ್ದಾರೆ ಎಂದರು.
ಈ ದೇಶಕ್ಕೆ ಬಿಜೆಪಿ ಅನಿವಾರ್ಯ ಎಂಬ ತೀರ್ಮಾನವನ್ನೂ ಜನ ಮಾಡಿದ್ದಾರೆ. ಹೆಚ್ಚಾಗಿ ದಲಿತರೇ ಇರುವ ಊರು ಮಹಲ್ಗೋಡು. ಇಷ್ಟೊಂದು ಸಂಭ್ರಮದಿಂದ ಸ್ವಾಗತ ಮಾಡಿದ್ದಾರೆ. ನಾನು ಅವರನ್ನ ಪಕ್ಷಕ್ಕೆ ಆತ್ಮೀಯ ಸ್ವಾಗತ ಕೋರುತ್ತೇನೆ ಎಂದರು. ದಲಿತರಿಗೆ ಮೀಸಲಾತಿ ಹೆಚ್ಚಿಸಿದ ನಮ್ಮ ನಿಲುವನ್ನ ಅವರು ಮೆಚ್ಚಿದ್ದಾರೆ. ದೇಶದ ಭದ್ರತೆಯನ್ನೂ ಗಮನಿಸಿ ಬಿಜೆಪಿ ಸೇರಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka