ಕನ್ನಡಿಗರಿಗೆ ಶಾಕಿಂಗ್ ನ್ಯೂಸ್ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ! - Mahanayaka
10:29 PM Saturday 7 - September 2024

ಕನ್ನಡಿಗರಿಗೆ ಶಾಕಿಂಗ್ ನ್ಯೂಸ್ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ!

aparna
11/07/2024

ಕನ್ನಡದ ಟಾಪ್ ನಿರೂಪಕಿ  ಟಿ ಅಪರ್ಣಾ ಇಂದು ಸಂಜೆ ಬನಶಂಕರಿ ಸೆಕೆಂಡ್ ಸ್ಟೇಜ್ ನ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕ್ಯಾನ್ಸರ್ನಿಂದ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್ ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು.

ಕನ್ನಡ ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ ಅವರು ಇನ್ನಿಲ್ಲ ಎನ್ನುವ ಆಘಾತಕಾರಿ ಸುದ್ದಿ ತಿಳಿದು ಬಂದಿದೆ. ಕನ್ನಡ ಚಿತ್ರರಂಗದಲ್ಲಿ ಬಹಳ ಸಕ್ರಿಯವಾಗಿರೋ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ಇನ್ನಿಲ್ಲ. ಇವರು ಅತ್ಯಂತ ಕಿರಿಯ ವಯಸ್ಸಿಗೆ ತಮ್ಮ ಜೀವ ಕಳೆದುಕೊಂಡಿದ್ದಾರೆ.


Provided by

ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿರುವ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಅಪರ್ಣಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ನಿರೂಪಕಿ. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್ ಪೆಕ್ಟರ್ ವಿಕ್ರಮ್ ಮೊದಲಾದ ಚಿತ್ರಗಳಲ್ಲಿ ನಟಿಸಿದರು.

90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಎಲ್ಲರನ್ನು ರಂಜಿಸಿದ್ರು.

2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ  ‘ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ನೀಡಿದ್ದರು. ಅಪರ್ಣಾ ಧ್ವನಿ ಮೆಟ್ರೋ ಪ್ರಯಾಣಿಕರ ಕಿವಿ ಹಾಗೂ ಮನಸ್ಸು ತಟ್ಟಿತ್ತು

ನಮ್ಮ ಮೆಟ್ರೋ ಅನೌನ್ಸ್ಮೆಂಟ್ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು. ಅಚ್ಚಕನ್ನಡ ಮಾತಾಡುವ ನಿರೂಪಕಿ ಆಗಿ ಅಪರ್ಣಾ ಜನಪ್ರಿಯರಾಗಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ