ಪ್ರಶ್ನೆ ಮಾಡಿದ್ದೇ ತಪ್ಪಂತೆ: ಬುಡಕಟ್ಟು ವ್ಯಕ್ತಿ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕನ ಪುತ್ರ
ಬಿಜೆಪಿ ಶಾಸಕರೊಬ್ಬರ ಪುತ್ರ, ತನ್ನೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಆರೋಪಿಸಿ 34 ವರ್ಷದ ಬುಡಕಟ್ಟು ವ್ಯಕ್ತಿ ಮೇಲೆ ಗುಂಡು ಹಾರಿಸಿದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.
ಗುಂಡಿನ ದಾಳಿಯಲ್ಲಿ ಬುಡಕಟ್ಟು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ನಂತರ ಬಿಜೆಪಿ ಶಾಸಕನ ಪುತ್ರ, 40 ವರ್ಷದ ವಿವೇಕಾನಂದ ವೈಶ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಮೊರ್ಬಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಶೋಕ್ ಸಿಂಗ್ ಪರಿಹಾರ್ ಅವರು ಹೇಳಿದ್ದಾರೆ.
ಆರೋಪಿ ವೈಶ್ಯ ಅವರು ಸಿಂಗ್ರೌಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ ಲಲ್ಲು ವೈಶ್ಯ ಅವರ ಪುತ್ರ. ಭಾರತೀಯ ದಂಡ ಸಂಹಿತೆಯ(IPC) ಸೆಕ್ಷನ್ 307 (ಕೊಲೆಗೆ ಯತ್ನ) ಮತ್ತು ಸೆಕ್ಷನ್ 25 (ಯಾವುದೇ ನಿಷೇಧಿತ ಶಸ್ತ್ರಾಸ್ತ್ರಗಳನ್ನು ಹೊಂದುವುದು ಅಥವಾ ಸಾಗಿಸುವುದು) ಮತ್ತು ಸೆಕ್ಷನ್ 27 (ಶಸ್ತ್ರಾಸ್ತ್ರ, ಮದ್ದುಗುಂಡುಗಳ ಬಳಕೆ) ಅಡಿ ವಿವೇಕಾನಂದ ವೈಶ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯ ನಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಬಂಧಿತ ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗಿದೆ.
ಘಟನೆ ಏನು..? ಆರೋಪಿಯು ತನ್ನ ಕಾರಲ್ಲಿ ಹೋಗುತ್ತಿದ್ದಾಗ ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ. ದೂರದಲ್ಲಿರುವ ಬುಧಿ ಮಾಯಿ ಮಾತಾ ದೇವಸ್ಥಾನದ ಬಳಿ ಕಿರಿದಾದ ರಸ್ತೆಯಲ್ಲಿ ಸಣ್ಣ ಕಾರಣಕ್ಕೆ ಗುಂಪಿನೊಂದಿಗೆ ಜಗಳವಾಡಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ಸಂತ್ರಸ್ತ ಸೂರ್ಯ ಕುಮಾರ್ ಖೈರ್ವಾರ್ ಆ ಗುಂಪಿನೊಂದಿಗೆ ಸೇರಿಕೊಂಡದ್ದಕ್ಕೆ ವೈಶ್ಯ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.
ಇದರಿಂದ ಕೋಪಗೊಂಡ ರಾಜಕಾರಣಿಯ ಪುತ್ರ, ಖೈರ್ವಾರ್ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಖೈರ್ವಾರ್ ಅವರನ್ನು ಜಿಲ್ಲಾ ಆಸ್ಪತ್ರೆಯ ಟ್ರಾಮಾ ವಾರ್ಡ್‌ಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw