ಬಿಟ್ ಕಾಯಿನ್ ಹಗರಣದ ಸೂತ್ರಧಾರ ‘ಶ್ರೀಕೃಷ್ಣ’ ಕರ್ನಾಟಕದಿಂದ ಪರಾರಿ?
ಬೆಂಗಳೂರು: ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ರಾಜ್ಯದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಡ್ರಗ್ಸ್ ಕೇಸ್ ನಲ್ಲಿ ಕೂಡ ಈತನ ಮೇಲೆ ಕೇಸ್ ದಾಖಲಾಗಿತ್ತು. ಮೂರು ವಾರಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಈತ ಷರತ್ತಿನ ಪ್ರಕಾರ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಇದೀಗ ಆತ ರಾಜ್ಯವನ್ನೇ ತೊರೆದಿದ್ದಾನೆ ಎಂದು ವರದಿಯಾಗಿದೆ.
ಮಾದಕ ವಸ್ತು ಸೇವಿಸಿ ಹೊಟೇಲೊಂದರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಆರೋಪದಡಿಯಲ್ಲಿ ಶ್ರೀಕೃಷ್ಣ ಹಾಗೂ ಈತನ ಸ್ನೇಹಿತ, ಉದ್ಯಮಿಯೋರ್ವರ ಮಗ ವಿಷ್ಣು ಭಟ್ ನನ್ನು ನವೆಂಬರ್ 5ರಂದು ಬಂಧಿಸಲಾಗಿತ್ತು. ಆ ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ ಈತ ತನಿಖಾಧಿಕಾರಿಗಳ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಶ್ರೀಕೃಷ್ಣನ ಜಾಮೀನು ರದ್ದುಪಡಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಜೈಲಿನಿಂದ ಬಿಡುಗಡೆಯಾಗಿದ್ದ ಶ್ರೀಕೃಷ್ಣ, ತನ್ನ ತಂದೆ ರಮೇಶ್ ಅವರನ್ನು ಮೊದಲಿಗೆ ಭೇಟಿಯಾಗಿದ್ದ. ಅವರ ಜೊತೆಗೆ ಹೆಬ್ಬಾಳದ ಆಸ್ಪತ್ರೆಯೊಂದಕ್ಕೆ ತೆರಳಿದ್ದ. ಅದರ ಮರುದಿನದಿಂದಲೇ ಆತನ ಸುಳಿವಿರಲಿಲ್ಲ ಎಂದು ಹೇಳಲಾಗಿದೆ. ಬಿಟ್ ಕಾಯಿನ್ ಹಗರಣದ ಮಾಹಿತಿ ಇರುವ ಶ್ರೀಕೃಷ್ಣನ ಜೀವಕ್ಕೆ ಅಪಾಯವಿದೆ ಎಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯನವರೇ ದೂರಿದ್ದರು. ಈ ಕಾರಣದಿಂದಾಗಿ ಆತನ ಕುಟುಂಬಕ್ಕೆ ಭದ್ರತೆ ನೀಡಲು ಇನ್ಸ್ ಪೆಕ್ಟರ್ ನೇತೃತ್ವದ ತಂಡವನ್ನು ನಿಯೋಜಿಸಲಾಗಿತ್ತು. ಈ ಇನ್ಸ್ ಪೆಕ್ಟರ್ ಸಂಪರ್ಕಕ್ಕೂ ಶ್ರೀಕೃಷ್ಣ ಸಿಕ್ಕಿಲ್ಲ ಎಂದು ವರದಿಯಾಗಿದೆ.
ಸದ್ಯದ ಅನುಮಾನಗಳ ಪ್ರಕಾರ ಕರ್ನಾಟಕದಿಂದ ಪರಾರಿಯಾಗಿರುವ ಶ್ರೀಕೃಷ್ಣ, ಪರಿಚಯಸ್ಥರ ಸಹಕಾರದೊಂದಿಗೆ ದೆಹಲಿಗೆ ಹೋಗಿದ್ದಾನೆ ಎನ್ನುವ ಮಾಹಿತಿ ಇದೆ ಎನ್ನಲಾಗುತ್ತಿದೆ. ಕೆಲ ದಿನಗಳಿಂದ ದೆಹಲಿಯಲ್ಲಿದ್ದ ಆತ ಅಲ್ಲಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸುತ್ತಾಡುತ್ತಿದ್ದಾನೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಾಡೋಜ ಕವಿ ದಿ.ಸಿದ್ಧಲಿಂಗಯ್ಯ ಅವರ ಸಹಧರ್ಮಿಣಿ ರಮಾದೇವಿಯವರು ಇಂದು ಕಾಸರಗೋಡಿಗೆ
ಅಂತರ್ ಧರ್ಮೀಯ ವಿದ್ಯಾರ್ಥಿ, ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಹಲ್ಲೆ: ನಾಲ್ವರು ಆರೋಪಿಗಳ ಬಂಧನ
ಮಕ್ಕಳು ಅಪೌಷ್ಠಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ | ಮೊಟ್ಟೆ ವಿರೋಧಕ್ಕೆ ಶಿಕ್ಷಣ ಸಚಿವರು ಹೇಳಿದ್ದೇನು?
ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣ: ಮತಾಂತರಕ್ಕೆ ಯತ್ನಿಸಿರುವುದು ಪತ್ತೆ
ಬುಡಕಟ್ಟು ಮಹಿಳೆಯರ ಜೊತೆ ಪ್ರಿಯಾಂಕಾ ಗಾಂಧಿ ನೃತ್ಯ: ನಾಚಿಕೆಯಾಗುವುದಿಲ್ಲವೇ? ಎಂದು ಕೇಳಿದ ಬಿಜೆಪಿ!
ಸಿಎಂ ಸ್ಥಾನದಿಂದ ಇಳಿಯುತ್ತಾರಾ ಬಸವರಾಜ್ ಬೊಮ್ಮಾಯಿ? | ಬಲವಾಗಿ ಕೇಳಿ ಬರುತ್ತಿರುವ ಚರ್ಚೆಗಳೇನು ಗೊತ್ತಾ?