ವಾಹನ ಇನ್ಸೂರೆನ್ಸ್ ನೆಪದಲ್ಲಿ ಕರೆದು ಶ್ರೀರಾಮಸೇನೆಯ ಕಾರ್ಯಕರ್ತನಿಗೆ ಹಲ್ಲೆ
ಉಡುಪಿ: ಶ್ರೀರಾಮ ಸೇನೆಯ ಕಾರ್ಯಕರ್ತನಿಗೆ ಮಾರಕಾಯುಧಗಳಿಂದ ಹಲ್ಲೆ ನಡೆಸಿರುವವರನ್ನು ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ರಾಜಾಂಗಣಕ್ಕೆ ಕರೆಸಿಕೊಂಡು ಕಾರ್ಯಕರ್ತನ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.
ವಾಹನ ಇನ್ಸೂರೆನ್ಸ್ ವಿಚಾರವಾಗಿ ಮಾತನಾಡಲು ಬರುವಂತೆ ಕರೆದು ಏಕಾಏಕಿ ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಹಲ್ಲೆಯ ಪರಿಣಾಮ ಕಾರ್ಯಕರ್ತನ ಬೆನ್ನಿಗೆ ತೀವ್ರವಾದ ಗಾಯಗಳಾಗಿವೆ.
ಘಟನೆ ಸಂಬಂಧ ಆಕ್ರೋಶ ವ್ಯಕ್ತಪಡಿಸಿರುವ ರಾಮಸೇನೆಯ ಜಿಲ್ಲಾಧ್ಯಕ್ಷ ಜಯರಾಮ್ ಅಂಬೆಕಲ್ಲು, ನಮ್ಮ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದು, ಕೃತ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕೃತ್ಯ ನಡೆಸಿದವರನ್ನು ತಕ್ಷಣವೇ ಪೊಲೀಸರು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಆರೋಪಿಗಳನ್ನು ತಕ್ಷಣವೇ ಬಂಧಿಸದಿದ್ದರೆ, ಉಡುಪಿ ಹಾಗೂ ದಕ್ಷಿಣ ಕನ್ನಡ ಶ್ರೀರಾಮ ಸೇನೆಯ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಲಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪತ್ನಿ ನಿದ್ದೆಗೆ ಜಾರಿದ್ದ ವೇಳೆ ಪತಿಯಿಂದ ಹೀನ ಕೃತ್ಯ: ನಡೆಯಿತು ಭೀಕರ ಕೊಲೆ
ಶಿಕ್ಷಕರ ಮೇಲೆ ವಿದ್ಯಾರ್ಥಿಗಳಿಂದ ಪುಂಡಾಟಿಕೆ: ವಿಡಿಯೋ ವೈರಲ್ ಆದ ಬಳಿಕ ನಡೆದದ್ದೇನು?
ಮಾಸ್ಕ್ ಹಾಕಿಲ್ಲ ಎಂದು ಮಗಳ ಎದುರೇ ತಂದೆಯ ಕೆನ್ನೆಗೆ ಬಾರಿಸಿದ ಪೊಲೀಸ್ ಅಧಿಕಾರಿ | ಬಿಕ್ಕಿಬಿಕ್ಕಿ ಅತ್ತ ಮಗಳು
ರಾಜ್ಯದ ಜನತೆಗೆ ಬಿಗ್ ಶಾಕ್: ಬೇಸಿಗೆಗೆ ಮುನ್ನವೇ ಏರಿಕೆಯಾಗಲಿದೆಯೇ ವಿದ್ಯುತ್ ಬೆಲೆ?
ಮೊಟ್ಟೆ ಕೊಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯಕೊಟ್ಟಂತಾಗುತ್ತದೆ | ಪೇಜಾವರ ಶ್ರೀ
ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಹಿಂದೂ-ಮುಸ್ಲಿಂ ಅಂತ ಅಲ್ಲ | ಸಿದ್ದರಾಮಯ್ಯ