ಬಿಜೆಪಿಗೆ ಆಘಾತ ನೀಡಿದ ಶ್ರೀರಾಮಸೇನೆ: ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ಹಾಕಿದರೆ ಪರಿಣಾಮ ಏನಾಗಲಿದೆ!?
ಚಿಕ್ಕಮಗಳೂರು: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕಾರ್ಕಳದಲ್ಲಿ ಸ್ಪರ್ಧಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಇದೀಗ ಇಕ್ಕಟ್ಟಿನ ಸ್ಥಿತಿಯಲ್ಲಿ ಸಿಲುಕಿದ್ದು, ಬಿಜೆಪಿ ಕಾರ್ಕಳದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಮುಂದಿನ ಪರಿಣಾಮ ಹೇಗಿರುತ್ತದೆ ಅನ್ನೋದನ್ನು ಶ್ರೀರಾಮ ಸೇನೆ ಇದೀಗ ಪತ್ರದ ಮೂಲಕ ಬಿಜೆಪಿಗೆ ಸ್ಯಾಂಪಲ್ ನೀಡಿದ್ದಾರೆ.
ಹೌದು…! ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕಾರ್ಕಳದಲ್ಲಿ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಬಿಜೆಪಿಯು ಕಾರ್ಕಳದಲ್ಲಿ ಅಭ್ಯರ್ಥಿ ಹಾಕಬಾರದು, ಒಂದು ವೇಳೆ ಅಭ್ಯರ್ಥಿ ಹಾಕಿದರೆ, ಚಿಕ್ಕಮಗಳೂರಿನಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿಗೆ ಶ್ರೀರಾಮ ಸೇನೆ ಎಚ್ಚರಿಕೆ ನೀಡಿದೆ.
ಬಿಜೆಪಿಯ ಗೆಲುವಿಗೆ ಈವರೆಗೆ ಸಹಕಾರಿಯಾಗಿದ್ದ ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ಅವರು ಈ ಬಾರಿ ಹಾಲಿ ಸಚಿವರಾದ ವಿ.ಸುನೀಲ್ ಕುಮಾರ್ ಅವರ ಕ್ಷೇತ್ರವಾದ ಕಾರ್ಕಳದಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಬಿಜೆಪಿಯ ಗೆಲುವಿನ ಅಭ್ಯರ್ಥಿ ಇರುವ ಕ್ಷೇತ್ರದಿಂದ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಬಾರದು ಒಂದು ವೇಳೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಇದರ ಪರಿಣಾಮ ಚಿಕ್ಕಮಗಳೂರಿನಲ್ಲೂ ಬೀರಲಿದ್ದು, ಚಿಕ್ಕಮಗಳೂರಿನಲ್ಲಿ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಬಿಜೆಪಿಗೆ ಆಘಾತವನ್ನು ನೀಡಲು ಶ್ರೀರಾಮ ಸೇನೆ ಮುಂದಾಗಿದೆ. ಮಾತ್ರವಲ್ಲದೇ ಇಡೀ ರಾಜ್ಯದಲ್ಲೇ ಬಿಜೆಪಿಗೆ ಶ್ರೀರಾಮ ಸೇನೆ ಶಾಕ್ ನೀಡುವ ಸಾಧ್ಯತೆಗಳು ಕಂಡು ಬಂದಿವೆ.
ಹಿಂದೂಗಳೇ ಅಧಿಕ ಸಂಖ್ಯೆಯಲ್ಲಿರುವ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಶ್ರೀರಾಮ ಸೇನೆ ಹಿಂದೂಗಳ ರಕ್ಷಣೆಗಾಗಿ ಪೈಪೋಟಿ ಆರಂಭಿಸಿದೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ನೆಲೆಯೂರಲು ನೆರವಾಗಿದ್ದ ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ಅವರಿಗೆ ಬಿಜೆಪಿ ಟಿಕೆಟ್ ನೀಡದೇ ಬಿಜೆಪಿ ಪದೇ ಪದೇ ಅವಮಾನಿಸಿತ್ತು. ಆದರೆ, ಈ ಬಾರಿ ಈ ರೀತಿಯ ಆಟ ನಡೆಯಲ್ಲ ಅನ್ನೋ ಸ್ಪಷ್ಟ ಸಂದೇಶವನ್ನು ಶ್ರೀರಾಮಸೇನೆ ಹಾಗೂ ಬಿಜೆಪಿಯೇತರ ಹಿಂದುತ್ವ ಸಂಘಟನೆಗಳು ನೀಡಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw