ಬೆಳಗಾವಿಯಲ್ಲಿ ಶ್ರೀರಾಮಸೇನೆಯ ಮುಖಂಡನ ಮೇಲೆ ಗುಂಡಿನ ದಾಳಿ - Mahanayaka

ಬೆಳಗಾವಿಯಲ್ಲಿ ಶ್ರೀರಾಮಸೇನೆಯ ಮುಖಂಡನ ಮೇಲೆ ಗುಂಡಿನ ದಾಳಿ

ravi kokithakar
08/01/2023

ಬೆಳಗಾವಿ: ಶ್ರೀರಾಮಸೇನೆಯ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ಘಟನೆ ನಡೆದಿದೆ.


Provided by

ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ರವಿ ಕೋಕಿತಕರ್, ಕಾರು ಚಾಲಕ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮನೋಜ್ ದೇಸೂರಕರ್‌ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಹಿಂಡಲಗಾ ಗ್ರಾಮದ ಬಳಿ ರೋಡ್ ಹಂಪ್ ನಲ್ಲಿ ಕಾರು ನಿಧಾನ ಮಾಡಿದ ವೇಳೆ ಬೈಕ್ ನಲ್ಲಿದ್ದ ಅಪರಿಚಿತರು ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದಾರೆ.


Provided by

ದುಷ್ಕರ್ಮಿಗಳು ಹಾರಿಸಿದ ಗುಂಡು ಮೊದಲು ರವಿ ಗದ್ದಕ್ಕೆ ತಗಲಿದ್ದು ಬಳಿಕ ಚಾಲಕನ ಕೈಗೆ ತಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಇಬ್ಬರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯನ್ನು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರವಾಗಿ ಖಂಡಿಸಿದ್ದು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ