ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯ 115ನೇ ಜನ್ಮ ದಿನ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ - Mahanayaka
6:09 PM Wednesday 11 - December 2024

ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯ 115ನೇ ಜನ್ಮ ದಿನ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ

siddaganga swamijji
01/04/2022

ತುಮಕೂರು: ‘ನಡೆದಾಡುವ ದೇವರು’ ಎಂದೇ ಖ್ಯಾತಿ ಪಡೆದ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜನ್ಮ ದಿನವನ್ನು ಇಂದು ಆಚರಿಸಲಾಗುತ್ತಿದ್ದು, ಸಿದ್ಧಗಂಗಾ ಮಠದಲ್ಲಿ ಸಂಭ್ರಮ ಮನೆ ಮಾಡಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಗಳ ವಿವಿದ ಭಾಗಗಳಿಂದ ಭಕ್ತರು, ಪ್ರಮುಖ ಗಣ್ಯರು ಅಪಾರ ಸಂಖ್ಯೆಯಲ್ಲಿ ಭಾಗವಹಿಸುತಿದ್ದಾರೆ. ಸ್ವಾಮೀಜಿಯವರ ಜನ್ಮ ದಿನದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ.

ಈ ಕಾರ್ಯಕ್ರಮಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಸಿಯೂಟ ಯೋಜನೆಗೆ ಶ್ರೀಗಳ ಹೆಸರಿಡುವುದಾಗಿ ಘೋಷಿಸಿದ್ದಾರೆ. ಬಸವಣ್ಣನವರ ತತ್ವ, ಸಿದ್ಧಾಂತಗಳನ್ನು ಪಸರಿಸಲು ಡಾ.ಶಿವಕುಮಾರ ಸ್ವಾಮೀಜಿ ಶ್ರಮಿಸಿದ್ದರು. ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಮರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಕ್ರಮವಾಗಿ ವಿದೇಶಕ್ಕೆ ಸಾಗಿಸುತ್ತಿದ್ದ 18.80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಪತ್ತೆ

ಗ್ರಾಹಕರಿಗೆ ಬಿಗ್ ಶಾಕ್: ಎಲ್​ ಪಿಜಿ ಸಿಲಿಂಡರ್​ ಬೆಲೆಯಲ್ಲಿ 250 ರೂಪಾಯಿ ಏರಿಕೆ

ಏನಿದು ಹಲಾಲ್ ಮಾಂಸ?  ಅದು ಅಷ್ಟೊಂದು ಅಪಾಯಕಾರಿಯೇ?

ಮೀಸಲಾತಿ ಕಲ್ಪಿಸದೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯ: ಸಿದ್ದರಾಮಯ್ಯ

ಜ್ಯೋತಿಷಿ ಮನೆ ದರೋಡೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

 

ಇತ್ತೀಚಿನ ಸುದ್ದಿ