ಕೋ ಆಪರೇಟಿವ್ ಬ್ಯಾಂಕಿನಲ್ಲಿ ಭರ್ಜರಿ ಉದ್ಯೋಗ ಅವಕಾಶ : ₹60,600 ವರೆಗೆ ವೇತನ - Mahanayaka
10:06 AM Thursday 17 - October 2024

ಕೋ ಆಪರೇಟಿವ್ ಬ್ಯಾಂಕಿನಲ್ಲಿ ಭರ್ಜರಿ ಉದ್ಯೋಗ ಅವಕಾಶ : ₹60,600 ವರೆಗೆ ವೇತನ

bank
13/07/2024

ವಿಜಯಪುರ ಜಿಲ್ಲೆಯಲ್ಲಿರುವ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿಯಮಿತ ಬ್ಯಾಂಕಿನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅನಿಸೂಚನೆ ಬಿಡುಗಡೆಯಾಗಿದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ನೇಮಕಾತಿ ಸಂಸ್ಥೆಯು ನಿಗದಿಪಡಿಸಿರುವ ಅರ್ಹತೆಗಳು, ವಯೋಮಿತಿ ಮಾನದಂಡ, ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು ಹಾಗೂ ಇತರ ಪ್ರಮುಖ ನೇಮಕಾತಿ ಮಾಹಿತಿಗಳನ್ನು ಲೇಖನದ ಕೆಳಗಿನ ಭಾಗದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವವರು ಮತ್ತು ಉದ್ಯೋಗ ನಿರೀಕ್ಷೆಯಲ್ಲಿರುವವರು ಈ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿರಿ.

Shri Siddeshwara Cooperative Bank Recruitment 2024 : ಶ್ರೀ ಸಿದ್ದೇಶ್ವರ ಸಹಕಾರಿ

ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳ ವಿವರ :

ಬಿಜಾಪುರ ಜಿಲ್ಲೆಯ ಈ ಸಹಕಾರಿ ಬ್ಯಾಂಕಿನಲ್ಲಿ ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಹಿರಿಯ ವ್ಯವಸ್ಥಾಪಕರು, ಹಿರಿಯ ಸಹಾಯಕ ಹುದ್ದೆಗಳು, ಅಟೆಂಡರ್ ಹುದ್ದೆಗಳು ಹಾಗೂ ವಾಹನ ಚಾಲಕ ಹುದ್ದೆಗಳು ಖಾಲಿ ಇವೆ.

ಈ ನೇಮಕಾತಿಯಲ್ಲಿ ಆಯ್ಕೆ ಆದವರು ಬಿಜಾಪುರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿ ಇರುವ ಹುದ್ದೆಗಳ ಸಂಖ್ಯೆ :

ಬಿಜಾಪುರ ಜಿಲ್ಲೆಯ ಈ ಸಹಕಾರಿ ಬ್ಯಾಂಕಿನಲ್ಲಿ ಎಲ್ಲಾ ಹುದ್ದೆಗಳು ಸೇರಿ ಒಟ್ಟು 48 ಹುದ್ದೆಗಳು ಖಾಲಿ ಇವೆ.

ವೇತನ : ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವು ₹14,550 ರಿಂದ ₹60,600 ರವರಿಗೆ ಇರಲಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು: ನೀವು ಈ ನೇಮಕಾತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವುದಾದರೆ ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದರು ವಿಶ್ವವಿದ್ಯಾಲಯದಿಂದ ಪದವಿ, ಹತ್ತನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹ ಇರುತ್ತಾರೆ.

ವಯೋಮಾನ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಬೇರೆಬೇರೆ ನಿಗದಿಪಡಿಸಲಾಗಿದೆ.

* ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 35 ವರ್ಷದ ಒಳಗಿರಬೇಕು.

* ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷದ ಒಳಗಿರಬೇಕು.

* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ವರ್ಗದ ಅಭ್ಯರ್ಥಿಗಳು ಗರಿಷ್ಠ 40 ವರ್ಷದ ಒಳಗಿರಬೇಕು

 ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಶುಲ್ಕದ ವಿವರ :

* ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹1,200 ರೂಪಾಯಿ

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳಿಗೆ – ₹600 ರೂಪಾಯಿ

 ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಪ್ರಮುಖ ದಿನಾಂಕಗಳ ವಿವರ :

*  ಅರ್ಜಿ ಸಲ್ಲಿಸಲು ಆರಂಭವಾಗಿರುವ ದಿನಾಂಕ : 04 ಜುಲೈ, 2024

*  ಕೊನೆಯ ದಿನಾಂಕ : 31 ಜುಲೈ 2024

ಅರ್ಜಿ ಸಲ್ಲಿಸುವ ಲಿಂಕ್ : https://ssbankvijayapur.com/index.php/appln_form


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ