ಕಂಬಳ ಕ್ಷೇತ್ರದ ಉಸೇನ್ ಬೋಲ್ಟ್ ಶ್ರೀನಿವಾಸ ಗೌಡ ಸಹಿತ ಮೂವರ ವಿರುದ್ಧ ದೂರು
ಮಂಗಳೂರು: ಕಂಬಳ ಕ್ಷೇತ್ರದ ಉಸೇನ್ ಬೋಲ್ಟ್ ಶ್ರೀನಿವಾಸ ಗೌಡ ಸೇರಿದಂತೆ ಕಂಬಳ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬವರು ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿ ಚಾನೆಲ್ ಗುಣಪಾಲ ಕಡಂಬ ಮತ್ತು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸೈ ವೀವ್ ಮಾಲೀಕ ರತ್ನಾಕರ ಎಂಬವರ ಮೇಲೆ ಲೋಕೇಶ್ ಶೆಟ್ಟಿ ಎಂಬವರು ದೂರು ನೀಡಿದ್ದಾರೆ.
ಅಧಿಕೃತ ಮಾನ್ಯತೆ ಪಡೆಯದ ನಂಬಲಾರ್ಹವಲ್ಲದ ಸೈವ್ ಯುಟ್ಯೂಬ್ ಸಂಸ್ಥೆಯಿಂದ ಸುಳ್ಳು ತೀರ್ಪಿನ ದಾಖಲೆ ನೀಡಲಾಗಿದೆ. ಪೊಲೀಸರು ತನಿಖೆ ನಡೆಸದೇ ಇದ್ದರೆ ನ್ಯಾಯಾಲಯದಲ್ಲಿ ಖಾಸಗಿ ದಾವೆ ಹೂಡುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
2020ರ ಫೆ.1ರಂದು ಐಕಳ ಕಂಬಳದಲ್ಲಿ 100 ಮೀ. ದೂರವನ್ನು 9.55 ಸೆಕೆಂಡ್ ನಲ್ಲಿ ಶ್ರೀನಿವಾಸ ಗೌಡ ಕ್ರಮಿಸಿದ್ದರು. ಬಳಿಕ ಅವರನ್ನು ಸರ್ಕಾರ ಹಾಗೂ ಹಲವು ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿದ್ದವು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka