ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ: ಪ್ರದೀಪ್ ಈಶ್ವರ್ - Mahanayaka
10:32 AM Thursday 12 - December 2024

ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ: ಪ್ರದೀಪ್ ಈಶ್ವರ್

pradeep eshwar
28/09/2024

ಚಿಕ್ಕಬಳ್ಳಾಪುರ: ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ. ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿಗಳು. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ನಗರದ ವಾರ್ಡ್ ನಂಬರ್ 24 ರಲ್ಲಿ ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಬಿಜೆಪಿಯವರು ಹೋರಾಟ ಮಾಡಬೇಕು ಅಂತ ಮಾಡ್ತಿದ್ದಾರೆ. ಮಾಡಲಿ, ಆದ್ರೆ ಕುಮಾರಸ್ವಾಮಿ, ಯಡಿಯೂರಪ್ಪನವರ ಮೇಲೆ ಎಫ್ ಐಆರ್ ಆಗಿಲ್ವಾ? ಬೇಲ್ ಮೇಲೆ ಹೊರಗಿಲ್ವಾ, ವಿಜಯೇಂದ್ರ ಮೇಲೆ ಇಲ್ವಾ ಅಂತ ಅವರು ಪ್ರಶ್ನಿಸಿದರು.

ಮೊದಲು ಅವರು ರಾಜೀನಾಮೆ ಕೊಟ್ಟು ಮೇಲ್ಪಂಕ್ತಿ ಹಾಕಿಕೊಡಲಿ, ಅವರಿಗೊಂದು ನ್ಯಾಯ, ನಮಗೊಂದು ನ್ಯಾಯಾನಾ ಎಂದು ಅವರು ಪ್ರಶ್ನಿಸಿದ್ದಾರೆ.

ಅಹಿಂದ ನಾಯಕ ಸಿದ್ದರಾಮಯ್ಯನವರನ್ನು ತುಳಿಯಲು ಪ್ರಯತ್ನ ಮಾಡುತ್ತಿದ್ದಾರೆ. ನಾವು ಇದನ್ನು ಸಹಿಸಲ್ಲ ಎಂದು ಪ್ರದೀಪ್ ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ